ಮಂಡ್ಯ, ನ. 14 :-ಕೆ.ಆರ್.ಪೇಟೆ ಉಪ ಚುನಾವಣೆ ಹಿನ್ನಲೆಯಲ್ಲಿ ಸಂಬಂಧಿಸಿದಂತೆ ಮೊದಲ ಹಂತದ ವಿದ್ಯುನ್ಮಾನ ಮತಯಂತ್ರ ಹಾಗೂ ವಿ.ವಿ. ಪ್ಯಾಟ್, ರ್ಯಾಂಡಮೈಜೇಷೆನ್ ಪ್ರಕ್ರಿಯೆ ಇಂದು ನಡೆಯಿತು.
ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ. ಎಂ. ವಿ. ವೆಂಕಟೇಶ್ ಹಾಗೂ ವಿವಿಧ ರಾಜಕೀಯ ಪಕ್ಷಗಳ ಸಮ್ಮುಖದಲ್ಲಿ ಇ.ವಿ.ಎಂ, ವಿ.ವಿ. ಪ್ಯಾಟ್, ರ್ಯಾಂಡಮೈಜೇಷೆನ್ ಪ್ರಕ್ರಿಯೆಯನ್ನು ಕೈಗೊಳ್ಳಲಾಯಿತು.
192- ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದ 258 ಮತಗಟ್ಟೆ ಸಂಬಂಧ ಪ್ರಥಮ ಹಂತದ ಇ.ವಿ.ಎಂ, ವಿ.ವಿ.ಪ್ಯಾಟ್, ರ್ಯಾಂಡಮೈಜೇಷೆನ್ ಪ್ರಕ್ರಿಯೆಯನ್ನು ನಡೆಸಲಾಯಿತು.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಎಂ. ವಿ. ವೆಂಕಟೇಶ್ ಅವರು ಮಾತನಾಡಿ ಭಾರತ ಚುನಾವಣಾ ಆಯೋಗದ ಆದೇಶದಂತೆ ಪ್ರಥಮ ಹಂತದ ರ್ಯಾಂಡಮೈಜೇಷೆನ್ ಪ್ರಕ್ರಿಯೆಯನ್ನು ನಡೆಸಲಾಗಿದೆ. ಮುಕ್ತ ಹಾಗೂ ಪಾರದರ್ಶಕವಾಗಿ ನಿರ್ವಹಿಸಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳಾದ ದಿನೇಶ್, ಮಂಜುನಾಥ್, ನವೀನ್ ಹಾಗೂ ಹಾಗೂ ಇತರರು ಹಾಜರಿದ್ದರು.