ನವದೆಹಲಿ: ಕರೋನಾ 3ನೇ ಅಲೆ ಭೀತಿ ನಡುವೆಯೇ ಗುರುವಾರ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 22,431 ಪ್ರಕರಣಗಳು ದೃಢಪಟ್ಟಿದೆ. ಇದೇ ಅವಧಿಯಲ್ಲಿ 318 ಮಂದಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.
ಒಟ್ಟು ಸೋಂಕಿತರ ಸಂಖ್ಯೆ 3,38,94,312ಕ್ಕೆ ತಲುಪಿದ್ದು, 4,49,856ಕ್ಕೆ ಸಾವಿನ ಸಂಖ್ಯೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 2,44,198ಕ್ಕೆ ತಲುಪಿದೆ.
ಕಳೆದ 24 ಗಂಟೆಗಳಲ್ಲಿ 29,639 ಮಂದಿ ಗುಣಮುಖರಾಗುವುದರೊಂದಿಗೆ, ಚೇತರಿಸಿಕೊಂಡವರ ಸಂಖ್ಯೆ 3,32,00,258ಕ್ಕೆ ತಲು ಪಿದೆ. ಇಲ್ಲಿಯವರೆಗೂ ಒಟ್ಟಾರೆ 92,63,68,608 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.