Friday, 22nd November 2024

ಲಖೀಂಪುರ ಖೇರಿ ಹಿಂಸಾಚಾರ ಪ್ರಕರಣ: ರಾಷ್ಟ್ರಪತಿ ಭೇಟಿಗೆ ವಿಪಕ್ಷ ಸಿದ್ದತೆ

ನವದೆಹಲಿ: ಉತ್ತರಪ್ರದೇಶದ ಲಖೀಂಪುರ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿ, ಕಾಂಗ್ರೆಸ್ ಪಕ್ಷ, ರಾಷ್ಟ್ರಪತಿ ರಮಾನಾಥ್ ಕೊವಿಂದ್ ಅವರನ್ನು ಭೇಟಿಯಾಗಲು ಸಮಯಾವಕಾಶ ಕೇಳಿದೆಯೆನ್ನ ಲಾಗಿದೆ.

ಅ .9 ರಂದು ರಾಷ್ಟ್ರಪತಿಯವರಿಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಪತ್ರ ಬರೆದಿದ್ದು, ರಾಹುಲ್ ಗಾಂಧಿ ನೇತೃತ್ವದ 7 ಮಂದಿ ಕಾಂಗ್ರೆಸ್ ಪಕ್ಷದ ನಾಯಕರ ನಿಯೋಗಕ್ಕೆ ಭೇಟಿಗೆ ಸಮಯ ನಿಗದಿ ಮಾಡಲು ಮನವಿ ಮಾಡಿಕೊಂಡಿದ್ದಾರೆ.

ನಿಯೋಗದಲ್ಲಿ ರಾಹುಲ್ ಗಾಂಧಿ ಅವರ ಜೊತೆ ಕಾಂಗ್ರೆಸ್ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಎ.ಕೆ. ಆಂಟನಿ, ಅಧೀರ್ ರಂಜನ್ ಚೌಧರಿ, ಪ್ರಿಯಾಂಕಾ ಗಾಂಧಿ ವಾದ್ರಾ, ಕೆ.ಸಿ. ವೇಣುಗೋಪಾಲ್, ಗುಲಾಂ ನಬಿ ಅಜಾದ್ ಅವರು ಇರುವುದಾಗಿ ಪತ್ರದಲ್ಲಿ ಬರೆಯಲಾಗಿದೆ.

ರೈತರ ಮೇಲೆ ಕಾರು ಹತ್ತಿಸಿದ ಆರೋಪದಲ್ಲಿ ಕೇಂದ್ರ ಸಚಿವ ಅಜಯ್‌ ಮಿಶ್ರಾರ ಪುತ್ರ ಆಶಿಷ್‌ ಮಿಶ್ರಾ ಅವರನ್ನು ಶನಿವಾರ ವಿಶೇಷ ತನಿಖಾ ತಂಡ(ಎಸ್‌ಐಟಿ) ಬಂಧಿಸಿತ್ತು.