ಮುಂಬೈ: ಕ್ರೂಸ್ ಶಿಪ್ನಲ್ಲಿ ಡ್ರಗ್ಸ್ ಪಾರ್ಟಿ ನಡೆಸಿದ ಆರೋಪದಲ್ಲಿ ಬಂಧಿಸಲ್ಪಟ್ಟಿರುವ ಬಾಲಿವುಡ್ ತಾರೆ ಶಾರುಖ್ ಖಾನ್ರ ಪುತ್ರ ಆರ್ಯನ್ ಖಾನ್ಗೆ ಇಂದೂ ಜಾಮೀನು ಸಿಗಲಿಲ್ಲ.
ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ(ಎನ್ಸಿಬಿ)ಗೆ ಹೇಳಿಕೆ ಸಲ್ಲಿಸಲು ಅವಕಾಶ ನೀಡಿದ ಮುಂಬೈನ ವಿಶೇಷ ಎನ್ಡಿಪಿಎಸ್ ಕೋರ್ಟ್, ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಿತ್ತು. ಗುರುವಾರ ವಿಚಾರಣೆ ನಡೆಸಿದ ನ್ಯಾಯಾಲಯ ತನ್ನ ಆದೇಶವನ್ನು ಅ. 20ರವರೆಗೆ ಕಾಯ್ದಿರಿಸಿದೆ. ನ್ಯಾಯಧೀಶ ವಿವಿ ಪಾಟೀಲ್ ಆದೇಶವನ್ನು ಕಾಯ್ದಿರಿಸಿದ್ದಾರೆ.
ಹತ್ತು ಇತರ ಆರೋಪಿಗಳೊಂದಿಗೆ ಎನ್ಸಿಬಿ ಅಧಿಕಾರಿಗಳಿಂದ ಬಂಧಿಸಲ್ಪಟ್ಟ 23 ವರ್ಷ ವಯಸ್ಸಿನ ಆರ್ಯನ್ ಖಾನ್, ಕಳೆದ ಶುಕ್ರವಾರದಿಂದ ಜೈಲಿನಲ್ಲಿದ್ದಾನೆ. ಅವನ ಜಾಮೀನು ಅರ್ಜಿಗೆ ಹೇಳಿಕೆ ಸಲ್ಲಿಸಲು ಎನ್ಸಿಬಿ ವಕೀಲರು ಶುಕ್ರವಾರದವರೆಗೆ ಕಾಲಾವಕಾಶ ಕೋರಿದರು.
ಆದರೆ ನ್ಯಾಯಾಲಯ ಬುಧವಾರದೊಳಗೆ ಹೇಳಿಕೆ ಸಲ್ಲಿಸಬೇಕೆಂದು ಸೂಚಿಸಿ, ವಿಚಾರಣೆ ಮುಂದೂಡಿತ್ತು. ಇದೀಗ ಪ್ರಕರಣದ ಆದೇಶವನ್ನು ಅ.20ರವರಗೆ ಕಾಯ್ದಿರಿಸಿದೆ.