Friday, 22nd November 2024

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯ ವಿಚಾರಿಸಿದ ರಾಹುಲ್ ಗಾಂಧಿ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಆರೋಗ್ಯ ವಿಚಾರಿಸಲು ಗುರುವಾರ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಭೇಟಿ ನೀಡಿ, ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದರು.

ಆಸ್ಪತ್ರೆಯ ವೈದ್ಯರ ಪ್ರಕಾರ, ಅವರ ಸ್ಥಿತಿ ಪ್ರಸ್ತುತ ಸ್ಥಿರ ವಾಗಿದೆ. ಅವರನ್ನು ಆಸ್ಪತ್ರೆಯ ಕಾರ್ಡಿಯೋ-ನ್ಯೂರೋ ಟವರ್‌ನ ಖಾಸಗಿ ವಾರ್ಡ್‌ಗೆ ದಾಖಲಿಸಲಾಗಿದೆ ಮತ್ತು ಡಾ ನಿತೀಶ್ ನಾಯಕ್ ನೇತೃತ್ವದ ಹೃದ್ರೋಗ ತಜ್ಞರ ತಂಡ ನೋಡಿಕೊಳ್ಳುತ್ತಿದೆ.

ಗುರುವಾರ, ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ದೆಹಲಿಯ ಏಮ್ಸ್ ನಲ್ಲಿ ಮನ ಮೋಹನ್ ಸಿಂಗ್ ಅವರನ್ನು ಭೇಟಿ ಮಾಡಿದರು. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕೂಡ ಮನಮೋಹನ್ ಸಿಂಗ್ ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಟ್ವಿಟರ್ ನಲ್ಲಿ ಪೋಸ್ಟ್ ಮೂಲಕ ಶುಭ ಹಾರೈಸಿ ದರು.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್, (89)ಎರಡು ದಿನಗಳ ಕಾಲ ಜ್ವರ ದಿಂದಾಗಿ ಬುಧವಾರ ನವ ದೆಹಲಿಯ ಏಮ್ಸ್ ಗೆ ದಾಖಲಾಗಿದ್ದರು. ಪಕ್ಷದ ಮೂಲಗಳ ಪ್ರಕಾರ, ಉತ್ತಮ ವೈದ್ಯಕೀಯ ಆರೈಕೆ ಮತ್ತು ಚೇತರಿಕೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.