ನವದೆಹಲಿ: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದಾಳಿ ಹಾಗೂ ಹಿಂದೂ ದೇವಾಲಯಗಳನ್ನು ಗುರಿಯಾಗಿರಿಸಿ ಧ್ವಂಸ ನಡೆಸುತ್ತಿರುವ ಕೃತ್ಯವನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಬುಧವಾರ ದೇಶಾ ದ್ಯಂತ ಪ್ರತಿಭಟನೆ ಹಮ್ಮಿಕೊಂಡಿದೆ.
ಹಲಿಯಲ್ಲಿರುವ ಬಾಂಗ್ಲಾದೇಶದ ರಾಯಭಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ವಿಶ್ವ ಹಿಂದೂ ಪರಿಷತ್ ಜಂಟಿ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಜೈನ್ ತಿಳಿಸಿದ್ದರು.
ಬಾಂಗ್ಲಾದೇಶದಲ್ಲಿರುವ ಅಲ್ಪಸಂಖ್ಯಾತ ಹಿಂದುಗಳ ವಿರುದ್ಧದ ಹಿಂಸಾಚಾರ ಘಟನೆ ಎಲ್ಲಾ ದಾಖಲೆ ಗಳನ್ನು ಪುಡಿಗಟ್ಟಿದೆ. ಸಾವಿರಾರು ಮಂದಿ ಹಿಂದೂ ಗಳ ಮೇಲೆ ದಾಳಿ ನಡೆಸಿದ್ದಾರೆ. ಈವರೆಗೆ ಹತ್ತಕ್ಕೂ ಹೆಚ್ಚು ಮಂದಿ ಹಿಂದೂಗಳ ಹತ್ಯೆಗೈಯಲಾಗಿದೆ. ಯಾವುದೇ ಕಾರಣಕ್ಕೂ ಹಿಂದೂಗಳ ಮೇಲಿನ ಅಮಾನವೀಯ ಕೃತ್ಯವನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಜೈನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನವದೆಹಲಿಯಲ್ಲಿರುವ ಬಾಂಗ್ಲಾದೇಶದ ರಾಯಭಾರಿ ಕಚೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ಪ್ರತಿಭಟನೆ ದೇಶದ ಪ್ರತಿಯೊಂದು ಜಿಲ್ಲೆಗಳಲ್ಲಿ ನಡೆಯಲಿದೆ ಎಂದು ತಿಳಿಸಿದ್ದಾರೆ.