Saturday, 23rd November 2024

ಪೂಂಚ್‌: 10ನೇ ದಿನಕ್ಕೆ ಕಾಲಿಟ್ಟ ಉಗ್ರರ ವಿರುದ್ಧ ಕಾರ್ಯಾಚರಣೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಭದ್ರತಾ ಪಡೆಗಳು ಉಗ್ರರ ವಿರುದ್ಧ ನಡೆಸುತ್ತಿರುವ ಕಾರ್ಯಾಚರಣೆ ಬುಧವಾರ 10ನೇ ದಿನಕ್ಕೆ ಕಾಲಿಟ್ಟಿದೆ.

ಅ.11ರಂದು ಪೂಂಚ್‌ ಜಿಲ್ಲೆಯಲ್ಲಿ ಉಗ್ರರ ಜೊತೆ ಆರಂಭವಾದ ಎನ್‌ಕೌಂಟರ್ ಬುಧವಾರ 9ನೇ ದಿನಕ್ಕೆ ಕಾಲಿಟ್ಟಿದೆ.  ಸುಮಾರು 13 ವರ್ಷಗಳ ಬಳಿಕ ಪೂಂಚ್‌ ಮತ್ತೊಂದು ಬಹುದೊಡ್ಡ ಉಗ್ರರ ಜೊತೆಗಿನ ಕಾರ್ಯಾಚರಣೆಗೆ ಸಾಕ್ಷಿಯಾಗಿದೆ.

ಉಗ್ರರಿಗಾಗಿ ಹುಡುಕಾಟ ಆರಂಭಿಸಿದ ಭದ್ರತಾ ಪಡೆಗಳು ಗುಂಡಿನ ಚಕಮಕಿ ಆರಂಭಿಸಿದವು. ಅ.11ರಂದು ಎನ್‌ಕೌಂಟರ್‌ನಲ್ಲಿ ಒಬ್ಬರು ಜೆಓಸಿ ಸೇರಿದಂತೆ ಐವರು ಯೋಧರು ಹುತಾತ್ಮರಾಗಿದ್ದಾರೆ. ಅ.14ರಂದು ಮತ್ತೊಂದು ಸುತ್ತಿನ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ಯೋಧರು ಹುತಾತ್ಮರಾದರು.

ಎನ್‌ಕೌಂಟರ್ ನಡೆದ ಸ್ಥಳದಲ್ಲಿ ಜೆಓಸಿ ಮತ್ತು ಯೋಧರ ಮೃತದೇಹ ಪತ್ತೆಯಾಗಿದೆ. ಉಗ್ರರ ವಿರುದ್ಧದ ಕಾರ್ಯಾಚರಣೆ ಆರಂಭವಾದ ಬಳಿಕ 9 ಯೋಧರು, ಇಬ್ಬರು ಜೆಓಸಿಗಳು ಹುತಾತ್ಮರಾಗಿದ್ದಾರೆ.