ನವದೆಹಲಿ: ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆಯಡಿಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಆರೋಪಿ ವಿರುದ್ಧ ಸಲ್ಲಿಸಿದ್ದ ದೋಷಾರೋಪ ಪಟ್ಟಿ ರದ್ದುಗೊಳಿಸಿರುವ ಕರ್ನಾಟಕ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ಅರ್ಜಿ ವಿಚಾರಣೆ ನಡೆಸಿದ ನ್ಯಾ.ಎ.ಎಂ.ಖಾನ್ವಿಲ್ಕರ್ ನೇತೃತ್ವದ ಪೀಠ, ಹೈಕೋರ್ಟ್ ಆದೇಶ ಪ್ರಶ್ನಿಸಿ ಏಪ್ರಿಲ್ 22ರಂದು ರಾಜ್ಯ ಸರ್ಕಾರ ಮತ್ತು ಗೌರಿ ಅವರ ಸಹೋದರಿ ಕವಿತಾ ಲಂಕೇಶ್ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಅನುಮತಿ ನೀಡಿದೆ.
ಆರೋಪಿ ಮೋಹನ್ ನಾಯಕ್ ವಿರುದ್ಧ ‘ಕೊಕಾ’ ಅಡಿ ದಾಖಲಿಸಲಾದ ಆರೋಪವನ್ನು ರದ್ದುಗೊಳಿಸಿದ್ದನ್ನು ಪ್ರಶ್ನಿಸಿ ಕವಿತಾ ಲಂಕೇಶ್ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆಯನ್ನು ನ್ಯಾ.ಎ.ಎಂ.ಖಾನ್ವಿಲ್ಕರ್ ನೇತೃತ್ವದ ತ್ರಿಸದಸ್ಯ ಪೀಠ ಪೂರ್ಣಗೊಳಿಸಿತು.
2017ರ ಸೆ.5 ರಂದು ಬೆಂಗಳೂರಿನ ರಾಜರಾಜೇಶ್ವರಿ ನಗರದ ಅವರ ನಿವಾಸದೆದುರು ಗೌರಿ ಲಂಕೇಶ್ ಅವರನ್ನು ಹತ್ಯೆ ಮಾಡಲಾಗಿತ್ತು.