Saturday, 23rd November 2024

64,180 ಕೋ. ಮೌಲ್ಯದ ರಾಷ್ಟ್ರೀಯ ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿಗೆ ಇಂದು ಚಾಲನೆ

ವಾರಣಾಸಿ: ಪ್ರಧಾನಮಂತ್ರಿ ಆತ್ಮನಿರ್ಭರ್ ಸ್ವಸ್ಥ ಭಾರತ್ ಯೋಜನೆಯಡಿ ಉತ್ತರ ಪ್ರದೇಶದಲ್ಲಿ 64,180 ಕೋಟಿ ಮೌಲ್ಯದ ರಾಷ್ಟ್ರೀಯ ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿಗೆ ಕಾರ್ಯಗಳಿಗೆ  ಸೋಮವಾರ ಚಾಲನೆ ನೀಡಲಿದ್ದಾರೆ.

ಕಳೆದ ಒಂದು ವಾರದಲ್ಲಿ ಎರಡನೇ ಬಾರಿ ಉತ್ತರ ಪ್ರದೇಶಕ್ಕೆ ಭೇಟಿ ನೀಡುತ್ತಿರುವ ಪ್ರಧಾನಿ ಮೋದಿ, 5,000 ಕೋಟಿ ಮೌಲ್ಯದ 9 ವೈದ್ಯಕೀಯ ಹಾಗೂ 30 ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಈ ವೇಳೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಹ ಹಾಜರಾಗಲಿದ್ದಾರೆ.

ಪ್ರಧಾನಮಂತ್ರಿ ಆತ್ಮನಿರ್ಭರ್ ಸ್ವಸ್ಥ ಭಾರತ್ ಯೋಜನೆಯು ವಾರಣಾಸಿ ವೈದ್ಯಕೀಯ ಕಾಲೇಜು, ಜಿಲ್ಲಾ ಆಸ್ಪತ್ರೆ, ತಾಲೂಕು ಆಸ್ಪತ್ರೆ ಹಾಗೂ ಪಂಚಾಯತ್ ಮತ್ತು ಬ್ಲಾಕ್ ಮಟ್ಟದ ವೈದ್ಯಕೀಯ ಸಿಬ್ಬಂದಿಗೆ ಅನುಕೂಲ ಕರವಾಗಿರಲಿದೆ.

ದೇಶದಲ್ಲಿ ಸೃಷ್ಟಿಯಾದ ಆರೋಗ್ಯ ಬಿಕ್ಕಟ್ಟುಗಳನ್ನು ಎದುರಿಸುವಲ್ಲಿ ಸಮುದಾಯಗಳನ್ನು ಸ್ವಾವಲಂಬಿಯಾಗಿ ಮಾಡುವುದು. ಈ ನಿಟ್ಟಿನಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳ ಆರೋಗ್ಯ ಮೂಲಸೌಕರ್ಯ, ಭದ್ರತೆ ಮತ್ತು ವೈದ್ಯಕೀಯ ಸಂಶೋಧನೆ ಕ್ಷೇತ್ರಗಳ ಶಕ್ತಿಯನ್ನು ವೃದ್ಧಿಸುವುದು ಪ್ರಧಾನಮಂತ್ರಿ ಆತ್ಮನಿರ್ಭರ್ ಸ್ವಸ್ಥ ಭಾರತ್ ಯೋಜನೆಯ ಪ್ರಮುಖ ಉದ್ದೇಶವಾಗಿದೆ.

ರಾಜ್ಯ ಆರೋಗ್ಯ ವ್ಯವಸ್ಥೆಗಳನ್ನು ಬಲಪಡಿಸಲು ಅಗತ್ಯವಾದ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸಲು ಈ ಯೋಜನೆಯು ನಿಧಿಯ ಅನುದಾನ ಒದಗಿಸುತ್ತದೆ.

ಪ್ರಧಾನ ಮಂತ್ರಿ ಆತ್ಮನಿರ್ಭರ್ ಸ್ವಸ್ಥ ಭಾರತ್ ಯೋಜನೆಯಡಿ 17,788 ಗ್ರಾಮೀಣ ಆರೋಗ್ಯ ಮತ್ತು ಆರೈಕೆ ಕೇಂದ್ರಗಳಿಗೆ ಹಾಗೂ 10 ಕೇಂದ್ರೀಕೃತ ರಾಜ್ಯಗಳಿಗೆ ಹೆಚ್ಚಿನ ಬೆಂಬಲವನ್ನು ಒದಗಿಸಲಿದೆ.