ಮುಂಬೈ: ಜಾಗತಿಕ ಷೇರು ಮಾರುಕಟ್ಟೆಯಲ್ಲಿನ ಅನಿಶ್ಚಿತತೆಯ ವಹಿವಾಟಿನ ಪರಿಣಾಮ, ಬುಧವಾರ ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ 207 ಅಂಕಗಳಷ್ಟು ಕುಸಿತದೊಂದಿಗೆ ದಿನಾಂತ್ಯದ ವಹಿವಾಟು ಅಂತ್ಯಗೊಂಡಿದೆ.
ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ 206.93 ಅಂಕ ಕುಸಿತ ಕಂಡಿದ್ದು, 61,143.33 ಅಂಕಗಳಲ್ಲಿ ದಿನಾಂತ್ಯದ ವಹಿ ವಾಟು ಕೊನೆಗೊಂಡಿದೆ. ಎನ್ ಎಸ್ ಇ ನಿಫ್ಟಿ 57.45 ಅಂಕ ಇಳಿಕೆಯಾಗಿದ್ದು, 18,210.95 ಅಂಕಗಳ ಗಡಿಗೆ ತಲುಪಿದೆ.
ಬಜಾಜ್ ಫೈನಾನ್ಸ್, ಬಜಾಜ್ ಫಿನ್ ಸರ್ವ್, ಇಂಡಸ್ ಇಂಡ್ ಬ್ಯಾಂಕ್, ಎಚ್ ಯುಎಲ್ ಮತ್ತು ಟಾಟಾ ಸ್ಟೀಲ್ ಷೇರುಗಳು ನಷ್ಟ ಕಂಡಿದೆ. ಮತ್ತೊಂದೆಡೆ ಏಷ್ಯನ್ ಪೇಂಟ್ಸ್, ಸನ್ ಫಾರ್ಮಾ, ಇನ್ಫೋಸಿಸ್, ಎಸ್ ಬಿಐ ಮತ್ತು ಆಲ್ಟ್ರಾ ಟೆಕ್ ಸಿಮೆಂಟ್ ಷೇರುಗಳು ಲಾಭ ಗಳಿಸಿದೆ.
ಬ್ಯಾಂಕಿಂಗ್, ಮೆಟಲ್ ಮತ್ತು ಎನರ್ಜಿ ಸೆಕ್ಟರ್ ಗಳ ಷೇರುಗಳು ಷೇರುಪೇಟೆಯ ವಹಿವಾ ಟಿನ ಕೊನೆಯಲ್ಲಿ ಬಹಳಷ್ಟು ಬೇಡಿಕೆ ಕುಸಿದ ಪರಿಣಾಮ ಷೇರುಗಳ ಮೌಲ್ಯ ಇಳಿಕೆ ಯಾಗಲು ಕಾರಣವಾಗಿದೆ.