Saturday, 23rd November 2024

ಕಪ್ಪು ಬಣ್ಣದ ನೀರಿನಲ್ಲಿ ಮೀನುಗಳ ಮಾರಣಹೋಮ

ಇಟಾನಗರ: ಅರುಣಾಚಲ ಪ್ರದೇಶದ ಪೂರ್ವ ಕಮೆಂಗ್ ಜಿಲ್ಲೆಯ ಕಮೆಂಗ್ ನದಿ ಯಲ್ಲಿ ನದಿಯ ನೀರು ಇದ್ದಕ್ಕಿದ್ದಂತೆ ಕಪ್ಪು ಬಣ್ಣಕ್ಕೆ ತಿರುಗಿ, ಸಾವಿರಾರು ಮೀನುಗಳು ಸತ್ತು ತೇಲುತ್ತಿರುವುದು ಕಂಡುಬಂದಿದೆ.

ಒಟ್ಟು ಕರಗಿದ ವಸ್ತುಗಳ ಹೆಚ್ಚಿನ ಅಂಶದಿಂದಾಗಿ ನದಿಯ ನೀರು ಕಪ್ಪು ಬಣ್ಣಕ್ಕೆ ತಿರುಗಿದೆ ಎಂದು ಜಿಲ್ಲಾ ಮೀನುಗಾರಿಕೆ ಅಧಿಕಾರಿ ತಿಳಿಸಿದ್ದಾರೆ.

ಜಿಲ್ಲಾ ಕೇಂದ್ರವಾದ ಸೆಪ್ಪಾದಲ್ಲಿ ನದಿಯಲ್ಲಿ ಸಾವಿರಾರು ಮೀನುಗಳು ಸತ್ತಿರುವುದು ಕಂಡುಬಂದಿದೆ ಎಂದು ಜಿಲ್ಲಾ ಮೀನು ಗಾರಿಕೆ ಅಭಿವೃದ್ಧಿ ಅಧಿಕಾರಿ (ಡಿಎಫ್‌ಡಿಒ) ಹಾಲಿ ತಾಜೋ ತಿಳಿಸಿದ್ದಾರೆ.

ನೀರಿನಲ್ಲಿ ಟಿಡಿಎಸ್ ಹೆಚ್ಚಿನ ಪ್ರಮಾಣ ದಲ್ಲಿರುವುದು ಮೀನುಗಳ ಸಾವುಗಳಿಗೆ ಕಾರಣ. ಇದು ನೀರಿನಲ್ಲಿ ಕಡಿಮೆ ಗೋಚರತೆ ಹಾಗೂ ಜಲಚರಗಳಿಗೆ ಉಸಿರಾಟದ ಸಮಸ್ಯೆಗಳನ್ನು ಉಂಟುಮಾಡುತ್ತದೆ ಎಂದು ಹೇಳಿದರು.