Friday, 22nd November 2024

ನೀಟ್ ಭೀತಿ: ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

ಕೊಯಮತ್ತೂರು: ‌ವೈದ್ಯಕೀಯ ಪದವಿ ಕೋರ್ಸ್‌ ಪ್ರವೇಶಕ್ಕೆ ನಡೆಯುವ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯ (ನೀಟ್‌) ಫಲಿತಾಂಶದ ಬಗ್ಗೆ ಆತಂಕಗೊಂಡಿದ್ದ 20 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಳೆದ ಸೆಪ್ಟೆಂಬರ್‌ನಲ್ಲಿ ನಡೆದಿದ್ದ ನೀಟ್‌ ಪರೀಕ್ಷೆ ಬರೆದಿದ್ದ ಕೆ.ಕೀರ್ತಿವಾಸನ್‌ ಎಂಬುವರೇ ಆತ್ಮಹತ್ಯೆ ಮಾಡಿಕೊಂಡ ಯುವಕ.

ಎರಡು (2019,2020) ಬಾರಿ ನೀಟ್‌ ಪರೀಕ್ಷೆ ಬರೆದಿದ್ದ ಅವರು ವೈದ್ಯಕೀಯ ಸೀಟು ಗಿಟ್ಟಿಸುವಲ್ಲಿ ವಿಫಲರಾಗಿದ್ದರು.

ಮೂರನೇ ಬಾರಿ ನೀಟ್‌ ಪರೀಕ್ಷೆ ಬರೆದಿದ್ದ ಅವರು ಕೀ-ಉತ್ತರಗಳನ್ನು ಗಮನಿಸಿ ನಿರಾಸೆ ಹೊಂದಿದ್ದರು. ಈ ಬಾರಿಯೂ ವೈದ್ಯಕೀಯ ಸೀಟು ದೊರೆಯುವ ಸಾಧ್ಯತೆ ಇಲ್ಲ ಎಂದು ಪೋಷಕರ ಬಳಿ ಹೇಳಿಕೊಂಡಿದ್ದರು.

ಫಲಿತಾಂಶ ಬರುವುದಕ್ಕೂ ಮುನ್ನವೇ ಯುವಕ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.