Friday, 18th October 2024

ಇಳಿಕೆ ಕಂಡ ತೈಲ ದರ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮಧ್ಯರಾತ್ರಿಯಿಂದಲೇ ಇಳಿಕೆ ಮಾಡಲಾ ಗಿದೆ.

ಕೇಂದ್ರದಿಂದ ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 10 ರೂ., ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು 5 ರೂಪಾಯಿ ಕಡಿಮೆ ಮಾಡಲಾಗಿದೆ. ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ವ್ಯಾಟ್ ಇಳಿಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವ ರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

ರಾಜ್ಯದಲ್ಲಿ ಪೆಟ್ರೋಲ್ ದರ 85.50 ರೂಪಾಯಿ, ಡೀಸೆಲ್ ದರ 81.50 ರೂ. ಆಗುವ ನಿರೀಕ್ಷೆಯಿದೆ ಎಂದು ಹೇಳಲಾಗಿದೆ.

ಕರ್ನಾಟಕ ರಾಜ್ಯ ಸರ್ಕಾರ ಡೀಸೆಲ್‌ ಮತ್ತು ಪೆಟ್ರೋಲ್ ಮೇಲೆ ತಲಾ 7 ರೂ. ಕಡಿಮೆ ಗೊಳಿಸಲು ನಿರ್ದರಿಸಿದೆ. ಈ ನಿರ್ಧಾರದಿಂದ ರಾಜ್ಯ ಸರ್ಕಾರಕ್ಕೆ ಅಂದಾಜು 2100 ಕೋಟಿ ರೂಪಾಯಿ ಕೆ.ಎಸ್.ಟಿ ಯಿಂದ ಬೊಕ್ಕಸಕ್ಕೆ ನಷ್ಟವಾಗುತ್ತದೆ. ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಅಂದಾಜು 95.50 ರೂ ಹಾಗೂ ಡಿಸೇಲ್ ಅಂದಾಜು 81.50 ರೂ ಆಗುವ ನೀರಿಕ್ಷೆಯಿದೆ‌.