ಬೆಂಗಳೂರು: ಕರ್ನಾಟಕದಲ್ಲಿ ಹಿಂಗಾರು ಮಳೆ ಶುರುವಾಗಿದ್ದು, ಇಂದಿನಿಂದ ನ.6 ರವರೆಗೂ ಮಳೆ ಹೆಚ್ಚಾಗಲಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಶಿವಮೊಗ್ಗ, ಚಿಕ್ಕಮಗ ಳೂರು, ಹಾಸನ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ನ.6ರವರೆಗೂ ಗುಡುಗು ಸಹಿತ ಮಳೆಯಾಗಲಿದೆ. ಕರಾವಳಿ, ದಕ್ಷಿಣ ಒಳನಾಡು, ಮಲೆ ನಾಡಿನಲ್ಲಿ ನಾಳೆ ಹಳದಿ ಅಲರ್ಟ್ ಘೋಷಿಸಲಾಗಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ. ಇಂದು ಮಲೆನಾಡಿನ ಜಿಲ್ಲೆಗಳ ಜತೆಗೆ ದಕ್ಷಿಣ ಒಳನಾಡಿನ ಚಾಮರಾಜನಗರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ, ಮೈಸೂರು, ರಾಮ ನಗರ ಜಿಲ್ಲೆಗಳಲ್ಲೂ ಹಳದಿ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕೊಂಕಣ ಕರಾವಳಿ, ಗೋವಾ ಮತ್ತು ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಚದುರಿದ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಇಂದಿನಿಂದ 3 ದಿನ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಗುಡುಗು, ಸಿಡಿಲಿನಿಂದ ಕೂಡಿದ ಮಳೆಯಾಗುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮೈಸೂರು, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಕೂಡ ನ.6ರವರೆಗೆ ಮಳೆ ಹೆಚ್ಚಾಗಲಿದೆ.
ಇಂದು ಕೇರಳದ ಬಹುತೇಕ ಸ್ಥಳಗಳಲ್ಲಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ತೆಲಂಗಾಣ ಮತ್ತು ಕರಾವಳಿ ಕರ್ನಾಟಕದಲ್ಲಿ ನವೆಂಬರ್ 6ರವರೆಗೆ ಮಳೆ ಮುಂದುವರೆಯಲಿದೆ. ದಕ್ಷಿಣ ಭಾರತದಲ್ಲಿ ಇನ್ನೂ 3 ದಿನ ಮಳೆ ಮುಂದುವರೆಯಲಿದೆ. ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ, ಗೋವಾ, ತಮಿಳುನಾಡು ಮತ್ತು ಕೇರಳದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.