Saturday, 23rd November 2024

ದೆಹಲಿಯಲ್ಲಿ ಉಚಿತ ಪಡಿತರ ಯೋಜನೆ ಆರು ತಿಂಗಳಿಗೆ ವಿಸ್ತರಣೆ

ನವದೆಹಲಿ: ದೆಹಲಿಯಲ್ಲಿ ಸರ್ಕಾರ, ಆರು ತಿಂಗಳವರೆಗೆ ಉಚಿತ ಪಡಿತರ ವಿತರಣೆ ಯೋಜನೆ ವಿಸ್ತರಿಸುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶನಿವಾರ ಹೇಳಿದರು.

ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಅಡಿಯಲ್ಲಿ ಉಚಿತ ಆಹಾರ ಧಾನ್ಯಗಳ ಪೂರೈಕೆಯನ್ನು ವಿಸ್ತರಿಸುವ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಕೇಂದ್ರವು ಹೇಳಿದ ಒಂದು ದಿನದ ನಂತರ ಅವರ ಪ್ರಕಟಣೆ ಹೊರಬಿದ್ದಿದೆ. ಇದಲ್ಲದೆ, ಸಾಂಕ್ರಾಮಿಕ ರೋಗದಿಂದಾಗಿ ಹಣದುಬ್ಬರ ಮತ್ತು ನಿರುದ್ಯೋಗವನ್ನು ಉಲ್ಲೇಖಿಸಿ, ಯೋಜನೆಯನ್ನು ಅಗತ್ಯವಿರುವ ಜನರಿಗೆ ಇನ್ನೂ ಆರು ತಿಂಗಳವರೆಗೆ ವಿಸ್ತರಿಸುವಂತೆ ದೆಹಲಿ ಸಿಎಂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದರು.

ದೆಹಲಿ ಸರ್ಕಾರ ತನ್ನ ಉಚಿತ ಪಡಿತರ ಯೋಜನೆಯನ್ನು ಆರು ತಿಂಗಳವರೆಗೆ ವಿಸ್ತರಿಸು ತ್ತಿದೆ ಎಂದು ಕೇಜ್ರಿವಾಲ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ. ಹಣದುಬ್ಬರ ಹೆಚ್ಚಾಗಿದೆ. ಜನಸಾಮಾನ್ಯರೂ ಎರಡು ಹೊತ್ತಿನ ರೊಟ್ಟಿ ಇಲ್ಲದೇ ಪರದಾಡುವಂತಾಗಿದೆ. ಹಲವರು ನಿರುದ್ಯೋಗಿಗಳಾಗಿದ್ದಾರೆ. ಪ್ರಧಾನಮಂತ್ರಿಗಳೇ, ದಯವಿಟ್ಟು ಬಡವರಿಗೆ ಉಚಿತ ಪಡಿತರ ನೀಡುವ ಈ ಯೋಜನೆಯನ್ನು ಇನ್ನೂ ಆರು ತಿಂಗಳವರೆಗೆ ವಿಸ್ತರಿಸಿ,’ ಎಂದು ಹೇಳಿದರು.

ಉತ್ತರ ಪ್ರದೇಶ ಕೂಡ ಮುಂದಿನ ವರ್ಷದ ಹೋಳಿ ಹಬ್ಬದವರೆಗೆ ಯೋಜನೆಯನ್ನು ವಿಸ್ತರಿಸಿದೆ ಎಂದು ಸಿಎಂ ಯೋಗಿ ಆದಿತ್ಯ ನಾಥ್ ಬುಧವಾರ ಘೋಷಿಸಿದ್ದರು.