ನಿವೃತ್ತ ಹೈಕೋರ್ಟ್ ನ್ಯಾಯಾಧೀಶರು ಪ್ರಕರಣದ ಮೇಲ್ವಿಚಾರಣೆ ಮಾಡಲಿ. ನಿರೀಕ್ಷಿ ಸಿದ ರೀತಿಯಲ್ಲಿ ತನಿಖೆ ನಡೆಯುತ್ತಿಲ್ಲ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರು ತನಿಖೆಯಲ್ಲಿ ಪ್ರಗತಿಯ ಬಗ್ಗೆ ಉತ್ತರ ಪ್ರದೇಶ ಸರಕಾರ ವನ್ನು ತರಾಟೆಗೆ ತೆಗೆದುಕೊಂಡರು.
ಅಕ್ಟೋಬರ್ 3 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯಲ್ಲಿ ರೈತರ ಪ್ರತಿಭಟನೆ ವೇಳೆ ನಾಲ್ವರು ರೈತರು ಹಾಗೂ ಪತ್ರಕರ್ತರು ಸೇರಿದಂತೆ ಎಂಟು ಜನರು ಮೃತ ಪಟ್ಟಿದ್ದರು. ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಬೆಂಗಾ ವಲು ವಾಹನಕ್ಕೆ ಸೇರಿದ್ದ ಎನ್ನಲಾದ ಎಸ್ಯುವಿ ವಾಹನವನ್ನು ಉದ್ದೇಶಪೂರ್ವಕವಾಗಿ ರೈತರ ಮೇಲೆ ಹರಿಸಿ ನಾಲ್ವರನ್ನು ಹತ್ಯೆಗೈಯ್ಯಲಾಗಿತ್ತು. ಪ್ರಕರಣದ ಪ್ರಮುಖ ಆರೋಪಿ ಕೇಂದ್ರ ಸಚಿವರ ಪುತ್ರ ಆಶಿಶ್ ಮಿಶ್ರಾ ಸೇರಿದಂತೆ 13 ಮಂದಿಯನ್ನು ಇದುವರೆಗೆ ಬಂಧಿಸ ಲಾಗಿದೆ.
ಸಿಜೆಐ ಎನ್.ವಿ. ರಮಣ, ನ್ಯಾಯಮೂರ್ತಿ ಸೂರ್ಯ ಕಾಂತ್ ಹಾಗೂ ನ್ಯಾಯಮೂರ್ತಿ ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠ ಅರ್ಜಿಯ ವಿಚಾರಣೆ ನಡೆಸುತ್ತಿದೆ.