Saturday, 23rd November 2024

ಇಂದಿನಿಂದ ನ. 16ರವರೆಗೆ ಭಾರೀ ಮಳೆ: ಹಳದಿ ಅಲರ್ಟ್​

Flood
ಬೆಂಗಳೂರು: ಕರ್ನಾಟಕದಲ್ಲಿ ಇಂದಿನಿಂದ ನ. 16ರವರೆಗೆ ಭಾರೀ ಮಳೆ ಸುರಿಯಲಿದೆ. ಚಿತ್ರದುರ್ಗ, ತುಮಕೂರು ಮತ್ತು ಕೋಲಾರಗಳಲ್ಲಿ ಭಾರೀ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮುಂದಿನ ಕೆಲವು ದಿನಗಳ ಕಾಲ ಚಳಿಯ ವಾತಾವರಣವಿರಲಿದೆ.
ಅಕ್ಟೋಬರ್ ತಿಂಗಳಿನಲ್ಲಿ 21 ಜನರು ಮೃತಪಟ್ಟಿದ್ದರು.

ಚಳಿಗಾಳಿಯ ಜೊತೆಗೆ ರಾಜ್ಯಾದ್ಯಂತ ವರುಣನ ಅಬ್ಬರವೂ ಮುಂದುವರೆದಿದೆ. ಮೈಸೂರು, ಚಿಕ್ಕಬಳ್ಳಾಪುರ, ರಾಮನಗರ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮಂಡ್ಯ, ಚಾಮರಾಜನಗರ, ಕೊಡಗು ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು ದಿನ ವ್ಯಾಪಕ ಮಳೆಯಾಗಲಿದ್ದು, ಇಂದು ಹಳದಿ ಅಲರ್ಟ್​ ಘೋಷಿಸಲಾಗಿದೆ.

ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಸೇರಿದಂತೆ ಪಶ್ಚಿಮ ಘಟ್ಟದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿರುವುದರಿಂದ ಹಳದಿ ಅಲರ್ಟ್ ಘೋಷಿಸ ಲಾಗಿದೆ. ಈ ಜಿಲ್ಲೆಗಳಿಗೆ ಮತ್ತು ರಾಮನಗರ, ದಾವಣಗೆರೆ, ಮೈಸೂರು, ಮಂಡ್ಯ, ಚಾಮರಾಜನಗರ ಸೇರಿದಂತೆ ದಕ್ಷಿಣ ಒಳನಾಡಿನ ಇತರ ಜಿಲ್ಲೆಗಳಿಗೆ ನ. 14 ಮತ್ತು ನ. 15ರಂದು ಹಳದಿ ಅಲರ್ಟ್ ಘೋಷಿಸಲಾಗಿದೆ.