ತುಮಕೂರು: ಅತ್ಯಾಚಾರ ಆರೋಪಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿ, ತುಮಕೂರು ಪೋಕ್ಸೋ ನ್ಯಾಯಾಲಯ ಆದೇಶ ಹೊರಡಿಸಿದೆ.
ಮಂಜುನಾಥ(28) ಜೈಲು ಶಿಕ್ಷೆಗೆ ಗುರಿಯಾದ ಅಪರಾಧಿ. 10 ವರ್ಷ ಜೈಲು ಶಿಕ್ಷೆ ಮತ್ತು 40 ಸಾವಿರ ದಂಡ ವಿಧಿಸಿ ಆದೇಶ ನೀಡಿದೆ.
ನ್ಯಾಯಾಧೀಶರಾದ ಕೃಷ್ಣಯ್ಯ ಅವರು ಆದೇಶ ಹೊರಡಿಸಿದರು. ಸರ್ಕಾರಿ ವಕೀಲೆ ಬಿ.ವಿ.ಗಾಯತ್ರಿ ರಾಜು ವಾದ ಮಂಡಿಸಿದ್ದರು.
2019ರಲ್ಲಿ 15 ವರ್ಷದ ಬಾಲಕಿಯನ್ನ ಅಪಹರಿಸಿ, ಮಂಜುನಾಥ ಅತ್ಯಾಚಾರ ನಡೆಸಿದ್ದ. ತುಮಕೂರು ಜಿಲ್ಲೆ, ತಿಪಟೂರು ತಾಲೂಕಿನ ನೊಣವಿನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.