Friday, 20th September 2024

ಬಿರ್ಸಾ ಮುಂಡಾ ಸ್ಮರಣಾರ್ಥ ರಾಂಚಿಯಲ್ಲಿ ವಸ್ತು ಸಂಗ್ರಹಾಲಯ ಉದ್ಘಾಟನೆ

ರಾಂಚಿ: ಬುಡಕಟ್ಟು ಸಮುದಾಯದ ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡಾ ಅವರ ಸ್ಮರಣಾರ್ಥ ರಾಂಚಿಯಲ್ಲಿ ನಿರ್ಮಿಸಿರುವ ವಸ್ತು ಸಂಗ್ರಹಾಲಯ ವನ್ನು ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಕ್ಕೆ ಸಮರ್ಪಿಸಿದರು.

ವರ್ಚುವಲ್ ಕಾರ್ಯಕ್ರಮದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ‘ಧರ್ತಿ ಆಬಾ ಅವರು ಹೆಚ್ಚು ಕಾಲ ಜೀವಿಸ ಲಿಲ್ಲ. ಆದರೆ ಇತಿಹಾಸ ಸೃಷ್ಟಿಸಿದ್ದಾರೆ ಮತ್ತು ದೇಶದ ಭವಿಷ್ಯದ ಪೀಳಿಗೆಗೆ ಮಾರ್ಗದರ್ಶನ ನೀಡಿದ್ದಾರೆ’ ಎಂದರು.

ಬಿರ್ಸಾ ಮುಂಡಾ ಅವರಿಗೆ ಗೌರವ ನಮನ ಸಲ್ಲಿಸಿದ ಮೋದಿಯವರು, ‘ಭಾರತದ ಬುಡಕಟ್ಟು ಸಮುದಾಯದ ಅಸ್ಮಿತೆಯನ್ನು ಅಳಿಸುವ ಸಿದ್ಧಾಂತದ ವಿರುದ್ಧ ಹೋರಾಡಿದರು’ ಎಂದು ನೆನಪಿಸಿಕೊಂಡರು.

ಆಧುನಿಕ ಶಿಕ್ಷಣದ ಪರವಾಗಿದ್ದ ಅವರು ಬದಲಾವಣೆಯ ಪ್ರತಿಪಾದಕರಾಗಿದ್ದರು. ಅವರದೇ ಸಮಾಜದ ನ್ಯೂನತೆ ಗಳನ್ನು ಗುರುತಿಸಿ, ಅದರ ವಿರುದ್ಧ ಹೋರಾಟ ನಡೆಸಿದ್ದರು’ ಎಂದು ಪ್ರಧಾನಿ ಸ್ಮರಿಸಿದರು.

ಜಾರ್ಖಂಡ್ ರಾಜ್ಯೋತ್ಸವ ದಿನದಂದು ನಡೆದ ಈ ಕಾರ್ಯಕ್ರಮದಲ್ಲಿ ಮುಖ್ಯ ಮಂತ್ರಿ ಹೇಮಂತ್ ಸೊರೆನ್, ಕೇಂದ್ರ ಸಚಿವ ಅರ್ಜುನ್ ಮುಂಡಾ ಮತ್ತು ಮಾಜಿ ಮುಖ್ಯಮಂತ್ರಿ ಬಾಬುಲಾಲ್ ಮರಾಂಡಿ ಸೇರಿದಂತೆ ಹಲವರು ಉಪಸ್ಥಿತ ರಿದ್ದರು.

ಬಿರ್ಸಾ ಮುಂಡಾ ಕೊನೆಯುಸಿರೆಳೆದ ರಾಂಚಿಯ ಹಳೆಯ ಕಾರಾಗೃಹದಲ್ಲಿ ಈ ವಸ್ತು ಸಂಗ್ರಹಾಲಯ ನಿರ್ಮಿಸಲಾಗಿದ್ದು, ಅದರಲ್ಲಿ 25 ಅಡಿ ಎತ್ತರದ ಮುಂಡಾ ಅವರ ಪುತ್ಥಳಿಯನ್ನೂ ಸ್ಥಾಪಿಸಲಾಗಿದೆ.