Friday, 22nd November 2024

403 ವಿಧಾನಸಭಾ ಕ್ಷೇತ್ರಗಳ ಪೈಕಿ 100 ಸ್ಥಾನಗಳಲ್ಲಿ ಸ್ಪರ್ಧೆ: ಎಐಎಂಐಎಂ ಘೋಷಣೆ

ಲಕ್ನೋ: ಇಂಡಿಯಾ ಮಜ್ಲಿಸ್-ಎ-ಇತ್ತೆಹಾದ್-ಉಲ್-ಮುಸ್ಲಿಮೀನ್, (ಎಐಎಂಐಎಂ)ಉತ್ತರ ಪ್ರದೇಶದ 403 ವಿಧಾನಸಭಾ ಸ್ಥಾನಗಳ ಪೈಕಿ 100 ಸ್ಥಾನಗಳಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದೆ. ಎಲ್ಲಾ ಪಕ್ಷಗಳು ಸಿದ್ಧತೆ ಮಾಡುತ್ತಿದೆ.

ಮೈತ್ರಿ ಮಾಡಿಕೊಳ್ಳಲು ಇತರ ಪಕ್ಷಗಳೊಂದಿಗೆ ಮಾತುಕತೆ ನಡೆಸಲಾಗುತ್ತಿದೆ. ನಾವು ಚುನಾವಣೆಯಲ್ಲಿ 403 ವಿಧಾನಸಭಾ ಸ್ಥಾನಗಳ ಪೈಕಿ 100 ಸ್ಥಾನಗಳಲ್ಲಿ ಸ್ಪರ್ಧೆ ಮಾಡಲಿದ್ದೇವೆ,” ಎಂದು ಎಐಎಂಐಎಂ ಪಕ್ಷವು ತಿಳಿಸಿದೆ.

ಲಕ್ನೋದಲ್ಲಿ ಮಾತನಾಡಿದ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, “ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಪಕ್ಷವು 100 ಸ್ಥಾನಗಳಲ್ಲಿ ಸ್ಪರ್ಧೆಗೆ ಇಳಿಯಲು ನಿರ್ಧರಿಸಿದೆ. ಇನ್ನೂ ಒಂದು ಅಥವಾ ಎರಡು ಪಕ್ಷಗಳೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ,” ಎಂದು ಹೇಳಿದ್ದಾರೆ.

ನಾವು ಚುನಾವಣೆಯ ವಿಚಾರದಲ್ಲಿ ಖಚಿತವಾಗಿ ಇದ್ದೇವೆ. ನಾವು ಚುನಾವಣೆಯಲ್ಲಿ ಗೆಲ್ಲುವ ಸ್ಥಿತಿಯಲ್ಲಿದೆ,” ಎಂದು ಓವೈಸಿ ತಿಳಿಸಿದ್ದಾರೆ. ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ) ಶುಕ್ರವಾರ ರಾಜ್ಯದಲ್ಲಿ ಸಮಾಜವಾದಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಸುಳಿವು ನೀಡಿದೆ.

ಉತ್ತರ ಪ್ರದೇಶದಲ್ಲಿ ಒಟ್ಟು 403 ವಿಧಾನಸಭೆ ಕ್ಷೇತ್ರಗಳು ಇದ್ದು, 2017ರಲ್ಲಿ ಬಿಜೆಪಿಯು ಒಟ್ಟು 312 ಸ್ಥಾನಗಳನ್ನು ತನ್ನ ತೆಕ್ಕೆಗೆ ಪಡೆದಿತ್ತು. ಆ ಬಳಿಕ ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್‌ ಅಧಿಕಾರದ ಚುಕ್ಕಾಣಿ ತನ್ನ ಕೈಗೆ ಪಡೆದಿದ್ದು, ಐದು ವರ್ಷಗಳ ಕಾಲ ಅಂದರೆ ಪೂರ್ಣಾವಧಿ ಮುಖ್ಯಮಂತ್ರಿಯಾಗಿ ಉಳಿದಿದ್ದಾರೆ.