ಚಂಡೀಗಢ: ಪಂಜಾಬ್ ನಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರ ಮತಗಳನ್ನು ಸೆಳೆಯಲು ದೆಹಲಿ ಮುಖ್ಯಮಂತ್ರಿ ಹಾಗೂ ಆಪ್ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಬಂಪರ್ ಆಫರ್ ಘೋಷಣೆ ಮಾಡಿದ್ದಾರೆ.
ಪಂಜಾಬ್ ರಾಜ್ಯದ ಎಲ್ಲಾ ಮಹಿಳೆಯರಿಗೆ ಪ್ರತಿ ತಿಂಗಳು 1000 ರೂ. ನೀಡುವು ದಾಗಿ ಘೋಷಣೆ ಮಾಡಿದ್ದಾರೆ.
ತಮ್ಮ ಪ್ರವಾಸದ ವೇಳೆ ಮಾತನಾಡಿದ ಕೇಜ್ರಿವಾಲ್, ಪಂಜಾಬ್ ನಲ್ಲಿ ಆಪ್ ಅಧಿಕಾರಕ್ಕೆ ಬಂದರೆ 18 ವರ್ಷ ಮೇಲ್ಪಟ್ಟ ಎಲ್ಲಾ ಮಹಿಳೆಯರಿಗೆ 1000 ರೂಪಾಯಿ ನೀಡಲಾಗುತ್ತದೆ. ಮನೆಯಲ್ಲಿ ಮೂವರು ಮಹಿಳೆಯರಿದ್ದರೆ ಎಲ್ಲರಿಗೂ ತಲಾ ಒಂದು ಸಾವಿರ ರೂಪಾಯಿ ನೀಡುತ್ತೇವೆ. ಇದು ವಿಶ್ವದ ಅತಿ ದೊಡ್ಡ ಮಹಿಳಾ ಸಶಕ್ತೀಕರಣ ಯೋಜನೆಯಾಗಿದೆ ಎಂದು ತಿಳಿಸಿದ್ದಾರೆ.