Saturday, 23rd November 2024

ತಮಿಳುನಾಡಿನಲ್ಲಿ ಧಾರಾಕಾರ ಮಳೆ ನಿರೀಕ್ಷೆ: ರೆಡ್ ಅಲರ್ಟ್

ಚೆನ್ನೈ: ತಮಿಳುನಾಡಿನಲ್ಲಿ ರಾಜ್ಯದ ಐದು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾ ಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.

ತಿರುನೆಲ್ವೇಲಿ, ತೂತುಕುಡಿ, ರಾಮನಾಥಪುರಂ, ಪುದುಕೊಟ್ಟೈ ಮತ್ತು ನಾಗ ಪಟ್ಟಣಂ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ಆಗಲಿದೆ. 27 ಜಿಲ್ಲೆಗಳಲ್ಲಿ ಸುರಿದ ಧಾರಾ ಕಾರ ಮಳೆಯಿಂದ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ-ಕಾಲೇಜುಗಳನ್ನು ಬಂದ್ ಮಾಡ ಲಾಗಿದೆ. ರಾಜ್ಯದಲ್ಲಿ ಸುರಿದ ನಿರಂತರ ಮಳೆ ಯಿಂದಾಗಿ ಸಾಕಷ್ಟು ಪ್ರಮಾಣದ ಬೆಳೆ ಹಾನಿಯಾಗಿದೆ. ಹಲವು ಪ್ರದೇಶಗಳಲ್ಲಿ ಕಟ್ಟಡಗಳು ಮುಳುಗಡೆಯಾಗಿದ್ದರೆ, ರಸ್ತೆಗಳು ಜಲಾವೃತಗೊಂಡಿದ್ದು, ಪ್ರವಾಹ ಪರಿಸ್ಥಿತಿಯನ್ನು ಸೃಷ್ಟಿಸಿವೆ.

ತಮಿಳುನಾಡಿನಲ್ಲಿ ಕಳೆದ ತಿಂಗಳಿನಿಂದ ಸುರಿಯುತ್ತಿರುವ ಸತತ ಮಳೆಯ ಹಿನ್ನೆಲೆಯಲ್ಲಿ ತೂತುಕುಡಿ, ಕನ್ಯಾಕುಮಾರಿ, ತಿರು ನಲ್ವೇಲಿ, ಕಡಲೂರು, ತಿರುವರೂರು, ತೆಂಕಶಿ ಮತ್ತು ವಿಲ್ಲುಪುರಂ ಸೇರಿದಂತೆ 27 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಶಿಕ್ಷಣ ಸಂಸ್ಥೆಗಳಿಗೂ ರಜೆ ಘೋಷಿಸಲಾಗಿದೆ.