Monday, 16th September 2024

ಬಿಗ್ ಶಾಕಿಂಗ್: ತಮಿಳುನಾಡು, ಕರ್ನಾಟಕ, ಆಂಧ್ರಪ್ರದೇಶದಲ್ಲಿ ಭಾರಿ ಮಳೆ…!

ಚೆನ್ನೈ : ಭಾರೀ ಮಳೆಯಿಂದಾಗಿ ತತ್ತರಿಸಿರುವ ಜನತೆಗೆ ಮತ್ತೊಂದು ಬಿಗ್ ಶಾಕಿಂಗ್ ಸುದ್ದಿ. ತಮಿಳುನಾಡು, ಕರ್ನಾಟಕ ಮತ್ತು ಆಂಧ್ರಪ್ರದೇಶಗಳಲ್ಲಿ ಭಾರೀ ಮಳೆ ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಮಿಳುನಾಡಿನಲ್ಲಿ ಇಂದಿನಿಂದ ನ.30 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ತಮಿಳುನಾಡಿನ ತಿರುನೆಲ್ವೇಲಿ, ತೂತು ಕುಡಿ, ರಾಮನಾಥಪುರಂ, ಪುದುಕೊಟ್ಟೈ ಮತ್ತು ನಾಗಪಟ್ಟಣಂ ಜಿಲ್ಲೆಗಳಲ್ಲಿ ಅತಿಹೆಚ್ಚು ಮಳೆ ಆಗಲಿದೆ. ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ 22 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತವಾಗಿ ಬದಲಾಗುವ ಸಾಧ್ಯತೆಯಿದ್ದು, ತಮಿಳುನಾಡು, ಕರ್ನಾಟಕ ಹಾಗೂ ಆಂಧ್ರಪ್ರದೇಶದಲ್ಲಿ ಭಾರಿ ಮಳೆಯಾಗಲಿದೆ.