Saturday, 23rd November 2024

ವಿದೇಶಿಗರಿಗೆ ಏಳು ದಿನ ಸಾಂಸ್ಥಿಕ ಕ್ವಾರಂಟೈನ್: ಮಹಾರಾಷ್ಟ್ರ ಸರ್ಕಾರ

ಮುಂಬೈ: ‘ಸೋಂಕಿತ’ ದೇಶಗಳಿಂದ ಆಗಮಿಸುವ ಎಲ್ಲಾ ಅಂತಾರಾಷ್ಟ್ರೀಯ ಪ್ರಯಾಣಿಕರು ಕಡ್ಡಾಯವಾಗಿ ಏಳು ದಿನಗಳ ಸಾಂಸ್ಥಿಕ ಕ್ವಾರಂಟೈನ್ ಗೆ ಒಳಗಾಗಬೇಕಾಗುತ್ತದೆ ಎಂದು ಮಹಾರಾಷ್ಟ್ರ ಸರ್ಕಾರ ಹೇಳಿದೆ.

ಮುಂಬೈ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರನ್ನು ಕಡ್ಡಾಯ ಐಸೋಲೇ ಶನ್ ಸೌಲಭ್ಯಗಳಲ್ಲಿ ಇರಿಸುವ ಆದೇಶ ವನ್ನು ತಕ್ಷಣವೇ ಜಾರಿಗೆ ತರಲಾಗಿದೆ. ಪ್ರಯಾಣಿಕರು ಗೊತ್ತುಪಡಿಸಿದ ಹೋಟೆಲ್‌ಗಳಲ್ಲಿ ಕ್ವಾರಂಟೈನ್‌ಗಾಗಿ ಪಾವತಿಸ ಬೇಕಾಗು ತ್ತದೆ ಎಂದು ಹೇಳಲಾಗಿದೆ.

ಪ್ರಯಾಣಿಕರು ಕೋವಿಡ್‌ಗಾಗಿ ಮೂರು ಬಾರಿ ಆರ್‌ಟಿ-ಪಿಸಿಆರ್ ಪರೀಕ್ಷೆಗಳನ್ನು ತೆಗೆದು ಕೊಳ್ಳಬೇಕಾಗುತ್ತದೆ. ಆಗಮನದ ನಂತರ ಎರಡನೇ, ನಾಲ್ಕನೇ ಮತ್ತು ಏಳನೇ ದಿನ ಆರ್‌ಟಿ-ಪಿಸಿಆರ್ ಪರೀಕ್ಷೆ ಮಾಡಿಸಿಕೊಳ್ಳಬೇಕಾಗುತ್ತದೆ.

ಪಾಸಿಟಿವ್ ಬರುವ ಪ್ರಯಾಣಿಕರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗುವುದು. ನೆಗೆಟಿವ್ ಪರೀಕ್ಷೆ ಮಾಡಿದವರು ಹೆಚ್ಚುವರಿಯಾಗಿ ಏಳು ದಿನಗಳ ಹೋಮ್ ಕ್ವಾರಂಟೈನ್‌ಗೆ ಒಳಗಾಗಬೇಕಾಗುತ್ತದೆ ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.

ರಾಜ್ಯಕ್ಕೆ ಪ್ರಯಾಣಿಸುವ ಅಂತಾರಾಷ್ಟ್ರೀಯ ಪ್ರಯಾಣಿಕರು, ಅವರು ಕಳೆದ 15 ದಿನ ಗಳಲ್ಲಿ ಭೇಟಿ ನೀಡಿದ ದೇಶಗಳ ವಿವರ ಸಲ್ಲಿಸಬೇಕು. ಆಗಮನದ ನಂತರ ಇದನ್ನು ಪರಿಶೀಲಿಸಲಾಗುತ್ತದೆ.

ಇತರ ದೇಶಗಳ ಪ್ರಯಾಣಿಕರು ಆಗಮನದ ನಂತರ ವಿಮಾನ ನಿಲ್ದಾಣದಲ್ಲಿ ಕಡ್ಡಾಯವಾಗಿ ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಒಳಗಾಗ ಬೇಕಾಗುತ್ತದೆ. ಪರೀಕ್ಷೆಯು ನಕಾರಾತ್ಮಕವಾಗಿದ್ದರೆ ಮನೆಯಲ್ಲಿ ಎರಡು ವಾರಗಳ ಸಂಪರ್ಕ ತಡೆಗೆ ಒಳಗಾಗ ಬೇಕಾಗುತ್ತದೆ. ಪಾಸಿಟಿವ್ ಇದ್ದರೆ ಅವರನ್ನು ಆಸ್ಪತ್ರೆಗೆ ರವಾನಿಸಲಾಗುತ್ತದೆ.

ಸೋಂಕು ಪೀಡಿತ ದೇಶಗಳ ಪಟ್ಟಿಯಲ್ಲಿ ಯುನೈಟೆಡ್ ಕಿಂಗ್‌ಡಮ್, ಯುರೋಪ್‌ನ ಎಲ್ಲಾ 44 ದೇಶಗಳು, ದಕ್ಷಿಣ ಆಫ್ರಿಕಾ, ಬ್ರೆಜಿಲ್, ಬಾಂಗ್ಲಾದೇಶ, ಬೋಟ್ಸ್‌ವಾನಾ, ಚೀನಾ, ಮಾರಿಷಸ್, ನ್ಯೂಜಿಲೆಂಡ್, ಜಿಂಬಾಬ್ವೆ, ಸಿಂಗಾಪುರ್, ಹಾಂಗ್ ಕಾಂಗ್ ಮತ್ತು ಇಸ್ರೇಲ್ ಸೇರಿವೆ.