Thursday, 19th September 2024

ಭಾರತದಲ್ಲಿ ರಾಜಕಾರಣ ಮಾಡುವುದಾದರೆ, ಭಾರತದಲ್ಲೇ ಇರಿ: ಮಮತಾ ಕಿಡಿ

ಮುಂಬೈ: ವರ್ಷದಲ್ಲಿ ಆರು ತಿಂಗಳು ವಿದೇಶದಲ್ಲಿಯೇ ಇದ್ದರೆ ರಾಜಕಾರಣ ಹೇಗೆ ಮಾಡಲು ಸಾಧ್ಯವಾಗುತ್ತದೆ ಎಂದು ಸಂಸದ ರಾಹುಲ್‌ ಗಾಂಧಿ ವಿರುದ್ಧ ಹರಿಹಾಯ್ದಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಭಾರತದಲ್ಲಿ ರಾಜ ಕಾರಣ ಮಾಡುದಾದರೆ ಭಾರತದಲ್ಲೇ ಇರಿ ಎಂದು ಕಿಡಿಕಾರಿದ್ದಾರೆ.

ಬಿಜೆಪಿ ವಿರುದ್ಧ ಹೋರಾಟ ನಡೆಸಲು ಪರ್ಯಾಯ ವ್ಯವಸ್ಥೆ ಬೇಕು. ಹೋರಾಟ ಮಾಡದ ಪಕ್ಷಕ್ಕೆ ಸಹಾಯ ಮಾಡಲು ಸಾಧ್ಯ ವಿಲ್ಲ ಎಂದು ಕಾಂಗ್ರೆಸ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ನಡೆದ ಪತ್ರಕರ್ತರು, ಕಲಾವಿದರು ಮತ್ತು ನಾಗರಿಕ ಸಂಘಟನೆಗಳ ಸದಸ್ಯರೊಂದಿಗೆ ನಡೆದ ಸಂವಾದದಲ್ಲಿ ಮಾತನಾಡಿದರು.

ಮುಂದಿನ ದಿನಗಳಲ್ಲಿ ಸಂಯುಕ್ತ ಪ್ರಗತಿಶೀಲ ಮೈತ್ರಿಕೂಟ ಎನ್ನುವುದು ಇರುವುದಿಲ್ಲ. ಯುಪಿಎ ಎಂದರೇನು? ಅದು ಎಲ್ಲಿದೆ? ಎಂದ ದೀದಿ, ಹೋರಾಟ ಮಾಡದ ಪಕ್ಷಕ್ಕೆ ಸಹಾಯ ಮಾಡಲು ಸಾಧ್ಯವಿಲ್ಲ ಎಂದರು.

ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾದ ನಂತರ ಈ ಬಗ್ಗೆ ಫೋಟೋಗಳ ಜತೆ ಅನಿಸಿಕೆ ಹಂಚಿಕೊಂಡು ಟ್ವೀಟ್ ಮಾಡಿರುವ ಶರದ್ ಪವಾರ್, ನನ್ನ ಮುಂಬೈ ನಿವಾಸ ದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಿದೆ. ಜನರ ಹಿತದೃಷ್ಟಿಯಿಂದ ದೇಶದಲ್ಲಿ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಉಳಿಸಿಕೊಳ್ಳಲು ಬದ್ಧತೆ ಪ್ರದರ್ಶಿಸಬೇಕು ಎಂಬ ಬಗ್ಗೆ ಇಬ್ಬರಲ್ಲೂ ಸಹಮತವಿತ್ತು ಎಂದು ಹೇಳಿದ್ದಾರೆ.