Saturday, 23rd November 2024

ಲಸಿಕೆ ವಿತರಣೆಯಲ್ಲಿ ಹೊಸ ದಾಖಲೆ: 1.25 ಕೋಟಿ ಡೋಸ್ ವಿತರಣೆ

ನವದೆಹಲಿ: ಕರೋನಾ ವೈರಸ್ ಲಸಿಕೆ ವಿತರಣೆಯಲ್ಲಿ ಭಾರತ ಹೊಸ ದಾಖಲೆ ಬರೆದಿದೆ.

ಡಿ.2ರಂದು 1,25,37,82,269 ಡೋಸ್ ಕೊವಿಡ್-19 ಲಸಿಕೆ ವಿತರಿಸಲಾಗಿದೆ. ದೇಶದಲ್ಲಿ ಕರೋನಾ ವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 321 ದಿನಗಳಾಗಿದ್ದು, ಗುರು ವಾರ ವೇಳೆಗೆ 42,00,780 ಮಂದಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ.

ಭಾರತವು ಕೊವಿಡ್-19 ಲಸಿಕೆ ವಿತರಣೆಯಲ್ಲಿ ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವ ದಲ್ಲಿ ಭಾರತವು ವಿಶ್ವದಲ್ಲಿ ಅತಿದೊಡ್ಡ ಲಸಿಕೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸುತ್ತಿದೆ ಎಂದು ಕೇಂದ್ರ ಸಚಿವ ಪಿಯೂಷ್ ಗೋಯೆಲ್ ಕೂ ಮಾಡಿದ್ದಾರೆ.

ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ, ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿ ಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು.

2021ರ ಡಿಸೆಂಬರ್ 2ರ ಅಂಕಿ-ಅಂಶಗಳ ಪ್ರಕಾರ, 1,38,46,29,010 ಡೋಸ್ ವೈರಸ್ ಲಸಿಕೆ ಪೂರೈಕೆ ಮಾಡಲಾಗಿದೆ.