ಟಾಟಾ ಟ್ರಸ್ಟ್ ಸಹಯೋಗದಲ್ಲಿ ಅಸ್ಸಾಂ ಸರ್ಕಾರ ರಾಜ್ಯದಲ್ಲಿ 19 ಕ್ಯಾನ್ಸರ್ ಕೇರ್ ಘಟಕಗಳನ್ನು ಸ್ಥಾಪಿಸುತ್ತಿವೆ. ರತನ್ ಟಾಟಾ ಅವರ ಉಪಸ್ಥಿತಿಯಲ್ಲಿ ಜೂನ್ 2018ರಲ್ಲಿ ಈ ಯೋಜನೆಗೆ ಅಡಿಪಾಯ ಹಾಕಲಾಯಿತು. 2018ರಲ್ಲಿ ಅಡ್ವಾಂಟೇಜ್ ಅಸ್ಸಾಂ – ಗ್ಲೋಬಲ್ ಇನ್ವೆಸ್ಟ್‌ಮೆಂಟ್ ಶೃಂಗಸಭೆ ಟಾಟಾ ಟ್ರಸ್ಟ್ ಕ್ಯಾನ್ಸರ್ ಕೇರ್ ಘಟಕ ಸ್ಥಾಪನೆ ಸಂಬಂಧ ಅಸ್ಸಾಂ ಸರ್ಕಾರದೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿತ್ತು.
ಅಸ್ಸಾಂ ಸರ್ಕಾರವು ತನ್ನ ಅತ್ಯುನ್ನತ ನಾಗರಿಕ ಪ್ರಶಸ್ತಿ ಅಸ್ಸಾಂ ಬೈಭವ್ ಅನ್ನು ಅಸ್ಸಾಂನಲ್ಲಿ ಕ್ಯಾನ್ಸರ್ ಆರೈಕೆ ಹೆಚ್ಚಿಸಲು ಅಸಾಧಾರಣ ಕೊಡುಗೆ ನೀಡಿದ ರತನ್ ಟಾಟಾ ಅವರಿಗೆ ಪ್ರದಾನ ಮಾಡಲು ನಿರ್ಧರಿಸಿದೆ ಎಂದು ಶರ್ಮಾ ಟ್ವೀಟ್ ಮಾಡಿದ್ದಾರೆ.
ಈ ಹಿಂದೆ ‘ಅಸ್ಸಾಂ ರತ್ನ’ ಎಂದು ಕರೆಯಲ್ಪಡುತ್ತಿದ್ದ ಪ್ರಶಸ್ತಿಯನ್ನು ಈ ವರ್ಷದ ಸೆಪ್ಟೆಂಬರ್‌ನಲ್ಲಿ ಶರ್ಮಾ ನೇತೃತ್ವದ ಸರ್ಕಾರವು ‘ಅಸ್ಸಾಂ ಬೈಭವ್’ ಎಂದು ಮರುನಾಮಕರಣ ಮಾಡಿದೆ.