Saturday, 23rd November 2024

9,216 ಹೊಸ ಕೋವಿಡ್ ಪ್ರಕರಣಗಳು ಪತ್ತೆ

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 9,216 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 391 ಮಂದಿ ಮೃತ ಪಟ್ಟಿದ್ದಾರೆ.

ಇದರೊಂದಿಗೆ ದೇಶದಲ್ಲಿನ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,46,15,757ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ. ಕೋವಿಡ್ 19 ಸೋಂಕಿನಿಂದ ದೇಶಾದ್ಯಂತ ಈವರೆಗೆ 4,70,115 ಮಂದಿ ಮೃತಪಟ್ಟಿದ್ದಾರೆ. ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 99,976ಕ್ಕೆ ತಲುಪಿದೆ.

ಕಳೆದ 24 ಗಂಟೆಗಳಲ್ಲಿ 213 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ. ದೇಶದಲ್ಲಿ ಕೋವಿಡ್ ಚೇತರಿಕೆ ಪ್ರಮಾಣ ಶೇ.98.35ರಷ್ಟಿದೆ.