ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಗಾಳಿಯ ಗುಣಮಟ್ಟ ಸುಧಾರಿಸಲು ಪಾಕಿಸ್ತಾನದಲ್ಲಿನ ಕೈಗಾರಿಕೆಗಳನ್ನು ಮುಚ್ಚಿಸಬೇಕೇ ಎಂದು ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಖಡಕ್ ಪ್ರಶ್ನೆ ಹಾಕಿದೆ.
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದ ಪೀಠವು ದೆಹಲಿ ಮತ್ತು ಎನ್‌ಸಿಆರ್ ವಲಯದಲ್ಲಿ ವಾಯುಮಾಲಿನ್ಯಕ್ಕೆ ಸಂಬಂಧಿಸಿದ ಅರ್ಜಿಯನ್ನು ಶುಕ್ರವಾರ ವಿಚಾರಣೆ ನಡೆಸಿತು.
ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಹಾಳಾಗುವುದಕ್ಕೆ ಪಾಕಿಸ್ತಾನದ ಕಲುಷಿತ ಗಾಳಿ ಕಾರಣ ಎಂದು ಉತ್ತರ ಪ್ರದೇಶ ಸರ್ಕಾರವು ನ್ಯಾಯಾಲಯಕ್ಕೆ ತಿಳಿಸಿತು. ದೆಹಲಿಯಲ್ಲಿ ವಾಯುಮಾಲಿನ್ಯದಲ್ಲಿ ಉತ್ತರ ಪ್ರದೇಶದ ಕೈಗಾರಿಕೆಗಳ ಪಾತ್ರವಿಲ್ಲ ಎಂದು ಹೇಳಿತು.
ಉತ್ತರ ಪ್ರದೇಶ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ರಂಜಿತ್ ಕುಮಾರ್, ರಾಜ್ಯದ ಕೈಗಾರಿಕೆಗಳು ಇಳಿಮುಖ ವಾಗಿದೆ. ಉತ್ತರ ಪ್ರದೇಶದಿಂದ ಕಲುಷಿತ ಗಾಳಿ ರಾಷ್ಟ್ರ ರಾಜಧಾನಿಯ ಕಡೆಗೆ ಬರುವುದಿಲ್ಲ ಎಂದು ವಾದ ಮಂಡಿಸಿದರು.
ನೆರೆಯ ಪಾಕಿಸ್ತಾನದ ಕಡೆಯಿಂದ ಬರುತ್ತಿರುವ ಕಲುಷಿತ ಗಾಳಿಯು ದೆಹಲಿಯ ಗಾಳಿಯ ಗುಣಮಟ್ಟದ ಮೇಲೆ ಪರಿಣಾಮ ಬೀರು ತ್ತಿದೆ. ಪಾಕಿಸ್ತಾನದಲ್ಲಿ ಕೈಗಾರಿಕೆಗಳು ಮತ್ತು ಅಲ್ಲಿದ ಕಲುಷಿತ ಗಾಳಿಯಿಂದ ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಹಾಳಾಗುತ್ತಿದೆ ಎಂದು ವಕೀಲ ರಂಜಿತ್ ಕುಮಾರ್ ಆರೋಪಿಸಿದರು.
ವಕೀಲ ರಂಜಿತ್ ಕುಮಾರ್ ವಾದಕ್ಕೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಎನ್ ವಿ ರಮಣ ಕೆಂಡವಾದರು. ಹಾಗಾದರೆ ದೆಹಲಿ ಯಲ್ಲಿ ಗಾಳಿಯ ಗುಣಮಟ್ಟ ಸುಧಾರಿಸುವುದಕ್ಕೆ ಪಾಕಿಸ್ತಾನದಲ್ಲಿ ಕೈಗಾರಿಕೆಗಳನ್ನು ಮುಚ್ಚಿಸಬೇಕೇ ಎಂದು ಖಡಕ್ ಆಗಿ ಪ್ರಶ್ನೆ ಮಾಡಿದರು.
ನವದೆಹಲಿಯಲ್ಲಿ ವಾಯು ಮಾಲಿನ್ಯದ ಹಿನ್ನೆಲೆ ನಿರ್ಮಾಣ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಲಾಗಿತ್ತು. ಶುಕ್ರವಾರ ದೆಹಲಿ ಸರ್ಕಾರವು ಸಲ್ಲಿಸಿದ ಅಫಿಡವಿಟ್ ನಲ್ಲಿ ಆಸ್ಪತ್ರೆಗಳ ನಿರ್ಮಾಣಕ್ಕೆ ಅನುಮತಿ ನೀಡುವಂತೆ ಮನವಿ ಸಲ್ಲಿಸಲಾಗಿತ್ತು. ರೋಗಿಗಳಿಗೆ ವೈದ್ಯಕೀಯ ಮೂಲಸೌಕರ್ಯಗಳನ್ನು ನೀಡಲು ಸರ್ಕಾರ ಕ್ರಮ ತೆಗೆದುಕೊಂಡಿದೆ. ಸಾಮಾನ್ಯವಾಗಿ ವಾಯು ಮಾಲಿನ್ಯ ಪ್ರಮಾಣ ಎಷ್ಟಿರಬೇಕು ಎಂಬುದಕ್ಕೆ ಒಂದು ಮಾನದಂಡವಿದೆ.