Saturday, 23rd November 2024

ಇಂದು ಸಂಜೆ ಬಿಪಿನ್ ರಾವತ್ ಅಂತ್ಯಕ್ರಿಯೆ

#BipinRawat

ನವದೆಹಲಿ: ಜನರಲ್ ಬಿಪಿನ್ ರಾವತ್ ಮತ್ತು ಅವರ ಪತ್ನಿಯ ಪಾರ್ಥಿವ ಶರೀರವನ್ನು ಶುಕ್ರವಾರ ಮಧ್ಯಾಹ್ನ 12:30 ರವರೆಗೆ ಸಾರ್ವಜನಿಕರಿಗೆ ಅಂತಿಮ ನಮನ ಸಲ್ಲಿಸಲು 3 ಕಾಮರಾಜ್ ಮಾರ್ಗದ ಅವರ ನಿವಾಸದಲ್ಲಿ ಇರಿಸಲಾಗು ವುದು.

ಪ್ರಧಾನಿ ನರೇಂದ್ರ ಮೋದಿ ಮತ್ತು ದೇಶದ ಉನ್ನತ ಸೇನಾ ಅಧಿಕಾರಿಗಳು ಗುರುವಾರ ಪಾಲಂ ವಾಯುನೆಲೆಯಲ್ಲಿ ಭಾರತದ ಮೊದಲ ರಕ್ಷಣಾ ಸಿಬ್ಬಂದಿ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ, ಬ್ರಿಗ್ ಎಲ್‌ಎಸ್ ಲಿಡರ್ ಮತ್ತು 10 ರಕ್ಷಣಾ ಸಿಬ್ಬಂದಿಗೆ ಗೌರವ ಸಲ್ಲಿಸಿದರು.

ಜನರಲ್ ರಾವತ್ ಅವರ ನಿವಾಸದಿಂದ ಬ್ರಾರ್ ಸ್ಕ್ವೇರ್ ಸ್ಮಶಾನಕ್ಕೆ ಮಧ್ಯಾಹ್ನ 2 ಗಂಟೆ ಸುಮಾರಿಗೆ ಅಂತಿಮ ಯಾತ್ರೆ ಆರಂಭ ವಾಗಲಿದೆ. ಸಂಜೆ 4 ಗಂಟೆಗೆ ಅಂತ್ಯಕ್ರಿಯೆ ನಿಗದಿಪಡಿಸಲಾಗಿದೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್, ಎನ್‌ಎಸ್‌ಎ ಅಜಿತ್ ದೋವಲ್, ಸೇನಾ ಮುಖ್ಯಸ್ಥ ಎಂಎಂ ನರವಾಣೆ, ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಆರ್ ಹರಿ ಕುಮಾರ್, ಏರ್ ಚೀಫ್ ಮಾರ್ಷಲ್ ಎವಿಆರ್ ಚೌಧರಿ ಮತ್ತು ರಕ್ಷಣಾ ಕಾರ್ಯದರ್ಶಿ ಅಜಯ್ ಕುಮಾರ್ ಅವರು ಗುರುವಾರದಂದು ಮೃತರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

‘ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮತ್ತು ಸಶಸ್ತ್ರ ಪಡೆಗಳ ಇತರ ಸಿಬ್ಬಂದಿಗೆ ನನ್ನ ಅಂತಿಮ ನಮನ ಸಲ್ಲಿಸಿದ್ದೇನೆ. ಅವರ ಉತ್ಕೃಷ್ಟ ಕೊಡುಗೆಯನ್ನು ಭಾರತ ಎಂದಿಗೂ ಮರೆಯುವುದಿಲ್ಲ ‘ಎಂದು ಮೋದಿ ಟ್ವೀಟ್ ಮಾಡಿದ್ದಾರೆ.