Saturday, 23rd November 2024

ಲೂಧಿಯಾನ ನ್ಯಾಯಾಲಯದಲ್ಲಿ ಸ್ಫೋಟ, ಇಬ್ಬರ ಸಾವು

Ludhiana

ಚಂಡೀಗಢ: ಪಂಜಾಬ್ ರಾಜ್ಯದ ಲೂಧಿಯಾನದ ನ್ಯಾಯಾಲಯದಲ್ಲಿ ಸ್ಫೋಟ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗುರುವಾರ ಲೂಧಿಯಾನ ನ್ಯಾಯಾಲಯದ 2ನೇ ಮಹಡಿಯಲ್ಲಿರುವ ಬಾತ್‌ ರೂಂನಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಬಾತ್‌ ರೂಂ ಅಕ್ಕಪಕ್ಕದ ಕೊಠಡಿಗಳ ಗೋಡೆಗೆ ಹಾನಿಯಾಗಿದೆ. ಕಿಟಕಿಯ ಗಾಜುಗಳು ಒಡೆದು ಹೋಗಿವೆ. ಪೊಲೀಸರು ಸ್ಥಳವನ್ನು ಸುತ್ತುವರೆದಿದ್ದು, ಅಗ್ನಿ ಶಾಮಕ ದಳದವರು ಸ್ಥಳಕ್ಕೆ ಆಗಮಿಸಿದ್ದಾರೆ.

ಲೂಧಿಯಾನದ ನ್ಯಾಯಾಲಯ ನಗರದ ಹೃದಯ ಭಾಗದಲ್ಲಿ ಜಿಲ್ಲಾಧಿಕಾರಿ ಕಚೇರಿಗಳ ಸಮೀಪವೇ ಇದೆ. ಸ್ಫೋಟದಲ್ಲಿ ಇಬ್ಬರು ಮೃತಪಟ್ಟಿದ್ದು, 4 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್‌ ಸಿಂಗ್‌ ಚನ್ನಿ ಸ್ಫೋಟದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯಕ್ಕೆ ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕ ಸಂಘಟನೆಗಳಿಂದ ಬೆದರಿಕೆ ಇದೆ. 25 ಸಿಆರ್‌ಪಿಎಫ್ ಮತ್ತು ದ್ರೋಣ್ ಧ್ವಂಸ ಮಾಡುವ ಪಡೆಯನ್ನು ಗಡಿಯಲ್ಲಿ ನಿಯೋಜನೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

ನ್ಯಾಯಾಲಯದ 2ನೇ ಮಹಡಿಯಲ್ಲಿರುವ ದಾಖಲೆಗಳ ರೂಂ ಸಮೀಪ ಸ್ಫೋಟ ಸಂಭವಿಸಿದೆ. ಬಾಂಬ್ ನಿಷ್ಕ್ರಿಯ ದಳ, ವಿಧಿ ವಿಜ್ಞಾನ ತಂಡದವರು ಚಂಡೀಗಢ್‌ನಿಂದ ಆಗಮಿಸುತ್ತಿದ್ದಾರೆ” ಎಂದು ಹೇಳಿದರು.