Friday, 22nd November 2024

ಒಮೈಕ್ರಾನ್ ಭೀತಿ: ದೆಹಲಿಯಲ್ಲಿ ನೈಟ್​ ಕರ್ಫ್ಯೂ ಇಂದಿನಿಂದ

newdelhi

ನವದೆಹಲಿ : ಕೋವಿಡ್ ಸೋಂಕಿತರ ಸಂಖ್ಯೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಈ ನಡುವೆ ಒಮಿಕ್ರಾನ್ ಭೀತಿಯೂ ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ನೈಟ್​ ಕರ್ಫ್ಯೂಗೆ ಸಿಎಂ ಅರವಿಂದ್ ಕೇಜ್ರಿವಾಲ್ ಸರ್ಕಾರ ಆದೇಶಿಸಿದೆ.

ಸೋಮವಾರದಿಂದ ರಾತ್ರಿ 11 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಕರ್ಫ್ಯೂ ಜಾರಿ ಮಾಡಿ, ಆದೇಶ ಹೊರಡಿಸಲಾಗಿದ್ದು, ಹೆಚ್ಚುತ್ತಿರುವ ಕೋವಿಡ್ ಸೋಂಕಿತರ ಸಂಖ್ಯೆ ಇಳಿಮುಖಗೊಳಿಸಲು ದೆಹಲಿ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. ದೆಹಲಿಯಲ್ಲಿ 290ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳೊಂದಿಗೆ 1,103 ಕ್ಕೆ ಏರಿದೆ.

ದೆಹಲಿಯಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 25,105ಕ್ಕೆ ತಲುಪಿದೆ. ಕರ್ನಾಟಕದಲ್ಲಿ ಕೋವಿಡ್ ನಿಯಂತ್ರಣಕ್ಕೆ ನೈಟ್​ ಕರ್ಫ್ಯೂ ಜಾರಿಯಾಗಿದೆ. ಉತ್ತರ ಪ್ರದೇಶ, ಹರಿಯಾಣ, ಗುಜರಾತ್​​ನಲ್ಲೂ ನೈಟ್​ ಕರ್ಫ್ಯೂ ಜಾರಿಯಾಗಿದ್ದು, ಸಮಯದ ವಿಚಾರದಲ್ಲಿ ಅಲ್ಪಸ್ವಲ್ಪ ಬದಲಾವಣೆಯಿದೆ.