ಕಾಶಿ ವಿಶ್ವನಾಥ ಕಾರಿಡಾರ್ ಉದ್ಘಾಟನೆ ಬಳಿಕ ಪ್ರಕಾಶ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದ್ದರು. ರಾಜ್ಯ ವಿಧಾನ ಮಂಡಲದ ಇತ್ತೀಚಿನ ಚಳಿಗಾಲದ ಅಧಿವೇಶನದಲ್ಲಿ, ವಿಶ್ವನಾಥ ಧಾಮ್ ದೇವಾಲಯದ ಸಂಕೀರ್ಣವನ್ನು ವಿಶಾಲವಾದ ಮತ್ತು ಸುಂದರ ವಾಗಿಸಿದ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ವಿಧಾನ ಪರಿಷತ್ತಿನಲ್ಲಿ ಅಭಿನಂದಿಸಿದ್ದರು.
ಬನಾರಸ್ ಹಿಂದೂ ವಿಶ್ವವಿದ್ಯಾಲಯದಲ್ಲಿ ಓದುತ್ತಿರುವಾಗ ರಾಜಕೀಯಕ್ಕೆ ಸೇರಿದ ಪ್ರಕಾಶ್, 1974 ರಲ್ಲಿ ವಾರಾಣಸಿ ಕಂಟೋನ್ಮೆಂಟ್ ನಿಂದ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಮೊದಲ ಬಾರಿಗೆ ವಿಧಾನಸಭೆಯ ಸದಸ್ಯರಾಗಿ ಆಯ್ಕೆಯಾದರು. ಮೂರು ವರ್ಷಗಳ ನಂತರ ಮತ್ತೆ ಅದೇ ಕ್ಷೇತ್ರದಿಂದ ಜನತಾ ಪಕ್ಷದ ಅಭ್ಯರ್ಥಿಯಾಗಿ ಆಯ್ಕೆಯಾದರು.
1985 ರಲ್ಲಿ ಲೋಕದಳ ಅಭ್ಯರ್ಥಿಯಾಗಿ ಮತ್ತು 1989 ರಲ್ಲಿ ಜನತಾ ದಳದ ಅಭ್ಯರ್ಥಿಯಾಗಿ ಪ್ರಕಾಶ್ ಅವರು ಚುನಾವಣೆಯಲ್ಲಿ ಗೆದ್ದಿದ್ದರು. ಮುಲಾಯಂ ಸಿಂಗ್ ಯಾದವ್ ನೇತೃತ್ವದ ಸರ್ಕಾರದಲ್ಲಿ ಕ್ಯಾಬಿನೆಟ್ ಸಚಿವರಾಗಿದ್ದರು.