Thursday, 24th October 2024

ಕರೋನಾ ಅಬ್ಬರ ಹೆಚ್ಚಳ: 22,775 ಮಂದಿಗೆ ಸೋಂಕು ದೃಢ

ನವದೆಹಲಿ : ಭಾರತದಲ್ಲಿ ಒಮೈಕ್ರಾನ್ ಆತಂಕದ ನಡುವೆಯೇ ಕರೋನಾ ಸೋಂಕಿನ ಅಬ್ಬರ ಹೆಚ್ಚಳವಾಗಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 22,775 ಮಂದಿಗೆ ಹೊಸದಾಗಿ ಸೋಂಕು ದೃಢಪಟ್ಟಿದೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 22,775 ಕೊರೊನಾ ಕೇಸ್ ಪತ್ತೆಯಾಗಿದ್ದು, 406 ಮಂದಿ ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 4,81,486 ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 8949 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ದೇಶದಲ್ಲಿ 11,10,855 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.