Saturday, 23rd November 2024

ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 102.50 ರೂ. ಕಡಿತ

CommercialGas

ನವದೆಹಲಿ: ಹೊಸ ವರ್ಷದಂದು ಇಂಡಿಯನ್ ಆಯಿಲ್ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯಲ್ಲಿ 102.50 ರೂಪಾಯಿ ಕಡಿತಗೊಳಿಸಲು ನಿರ್ಧರಿಸಿದೆ.

ಜನವರಿ 1, 2022 ರಂದು, ದೆಹಲಿಯಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು 102 ರೂ. ಕಡಿತಗೊಳಿಸಲಾಗಿದೆ. ದೆಹಲಿಯಲ್ಲಿ 19 ಕೆಜಿಯ ಸಿಲಿಂಡರ್ ರೂ. 1998ಗೆ ದೊರೆಯಲಿದೆ. ಚೆನ್ನೈನಲ್ಲಿ ಗ್ರಾಹಕರು 2,131 ರೂ. ಹಾಗೂ ಮುಂಬೈನಲ್ಲಿ 1948.50 ರೂ ಪಾವತಿಸಬೇಕಾಗುತ್ತದೆ. ಇದೇ ಕೋಲ್ಕತ್ತಾ ಗ್ರಾಹಕರಿಗೆ 2076 ರೂ.ಗೆ ಲಭ್ಯವಾಗಲಿದೆ.

ವಾಣಿಜ್ಯ ಬಳಕೆಯ ಸಿಲಿಂಡರ್ ಗಳ ಬೆಲೆ ಇಳಿಕೆ ಮಾಡಿರುವ ಇಂಡಿಯನ್ ಆಯಿಲ್, ಗೃಹ ಬಳಕೆಯ ಸಿಲಿಂಡರ್ ಗಳ ಬೆಲೆಯಲ್ಲಿ ಯಾವುದೇ ಇಳಿಕೆ ಮಾಡಿಲ್ಲ.

ಕಳೆದ ಅಕ್ಟೋಬರ್‌ನಲ್ಲಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಹೆಚ್ಚಿಸಲಾಗಿತ್ತು. ದೆಹಲಿ ಮತ್ತು ಮುಂಬೈನಲ್ಲಿ ಸಬ್ಸಿಡಿ ರಹಿತ 14.2 ಕೆಜಿ ಗೃಹಬಳಕೆಯ ಎಲ್’ಪಿಜಿ ಸಿಲಿಂಡರ್ ಬೆಲೆ 899.50 ರೂ ಇದೆ. ಕೋಲ್ಕತ್ತಾದಲ್ಲಿ ರೂ 926 ಆಗಿದ್ದರೆ, ಚೆನ್ನೈನಲ್ಲಿ ರೂ 915.50 ಕ್ಕೆ 14.2 ಕೆಜಿ ದೇಶೀಯ ಎಲ್ಪಿಜಿ ಸಿಲಿಂಡರ್ ಅನ್ನು ಪಡೆಯಲಾಗುತ್ತಿದೆ.

ಡಿಸೆಂಬರ್‌ನಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು 100 ರೂಪಾಯಿಗಳಷ್ಟು ಹೆಚ್ಚಿಸಲಾಗಿತ್ತು. ಅಕ್ಟೋಬರ್‌ನಲ್ಲಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಹೆಚ್ಚಿಸಲಾಗಿತ್ತು.