Thursday, 19th September 2024

ತೆಲುಗು ನಟ ಮಹೇಶ್ ಬಾಬು ಅಪರೂಪದ ಸಾಧನೆ

ಹೈದರಾಬಾದ್: ಸೂಪರ್ ಸ್ಟಾರ್ ಮಹೇಶ್ ಬಾಬು ಸಾಮಾಜಿಕ ಜಾಲತಾಣದಲ್ಲಿ ಅಪರೂಪದ ಸಾಧನೆ ಮಾಡಿದ್ದಾರೆ.

ಮಹೇಶ್ ಬಾಬು ತಮ್ಮ ಕುಟುಂಬದೊಂದಿಗೆ ದುಬೈನಲ್ಲಿ ಈ ಬಾರಿ ಹೊಸ ವರ್ಷವನ್ನು ಆಚರಿಸಿದ್ದಾರೆ. ಈ ಸಂದರ್ಭದಲ್ಲಿ ತಮ್ಮ ಕುಟುಂಬದೊಂದಿಗೆ ಇರುವ ಫೋಟೋವನ್ನು ಟ್ವೀಟರ್ ನಲ್ಲಿ ಫೋಸ್ಟ್ ಮಾಡಿ ಎಲ್ಲಾ ಅಭಿಮಾನಿಗಳಿಗೆ ಶುಭ ಹಾರೈಸಿದ್ದರು. ಈ ಟ್ವೀಟ್ ಮೈಕ್ರೋಬ್ಲಾಗಿಂಗ್ ಸೈಟ್ ನಲ್ಲಿ ದಾಖಲೆ ಸಂಖ್ಯೆಯ ಲೈಕ್ ಗಳನ್ನು ಗಳಿಸುವ ಮೂಲಕ ಸಂಚಲನ ಸೃಷ್ಟಿಸಿದೆ.

ಮಹೇಶ್ ಬಾಬು ಒಂದು ಟ್ವೀಟ್ ಮಾಡಿದರೆ ಲಕ್ಷಕ್ಕೂ ಅಧಿಕ ಲೈಕ್ಸ್ ಬರುತ್ತವೆ. ಅವರು ಟ್ವೀಟ್ ಮಾಡಿದ ಕೆಲವೇ ಗಂಟೆಗಳಲ್ಲಿ 1 ಲಕ್ಷಕ್ಕೂ ಹೆಚ್ಚು ಲೈಕ್ ಗಳನ್ನು ಪಡೆದ 31ನೇ ಟ್ವೀಟ್ ನ್ನು ಹೊಸ ವರ್ಷದ ಸಂದರ್ಭದಲ್ಲಿ ಮಾಡಲಾಗಿದೆ.

ಈ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಸಾಧನೆ ಮಾಡಿದ ಏಕೈಕ ಭಾರತೀಯ ನಟ ಎಂಬ ಹೆಗ್ಗಳಿಕೆಗೆ ಮಹೇಶ್ ಬಾಬು ಪಾತ್ರರಾಗಿದ್ದಾರೆ.