Friday, 22nd November 2024

ಭದ್ರತಾ ಲೋಪ ತನಿಖೆಗೆ ಉನ್ನತಾಧಿಕಾರ ಸಮಿತಿ ನೇಮಕ

ಚಂಡೀಗಢ: ಪಂಜಾಬ್ ಸರ್ಕಾರವು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಿದ ಸಂದರ್ಭದಲ್ಲಿ ಭದ್ರತಾ ಲೋಪಗಳಾಗಿವೆಯೇ ಎಂಬ ಬಗ್ಗೆ ತನಿಖೆ ನಡೆಸಲು ಗುರುವಾರ ಉನ್ನತಾಧಿಕಾರ ಸಮಿತಿಯನ್ನು ನೇಮಿ ಸಿದೆ.

ಒಂದು ಬಾರಿ ಭದ್ರತಾ ಲೋಪವಾಗಿ ಪ್ರಧಾನಿಯವರ ಬೆಂಗಾವಲು ವಾಹನಗಳು ಫಿರೋಜ್‍ಪುರರದಲ್ಲಿ ನಡೆಸಿದ ರಸ್ತೆ ತಡೆಯಿಂದಾಗಿ ಫ್ಲೈ ಓವರ್ ಒಂದರ ಮೇಲೆಯೇ ಸಿಲುಕಿಕೊಳ್ಳುವಂತಾಗಿ ಬಳಿಕ ಮೋದಿ ಅವರು ಚುನಾ ವಣೆ ನಡೆಯಬೇಕಿರುವ ಪಂಜಾಬ್‍ನಲ್ಲಿನ ರ್ಯಾಲಿ ಸೇರಿದಂತೆ ಯಾವುದೇ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದೆ ವಾಪಸಾಗಬೇಕಾಯಿತು. ಕೇಂದ್ರ ಗೃಹ ಸಚಿವಾಲಯವು ರಾಜ್ಯ ಸರ್ಕಾರಕ್ಕೆ ತತ್‍ಕ್ಷಣವೇ ಒಂದು ವರದಿ ಸಲ್ಲಿಸಲು ಸೂಚಿಸಿದೆ.

ಇಂಥ ಕರ್ತವ್ಯಲೋಪವು ಪ್ರಧಾನಿಯವರ ಭೇಟಿಯ ಸಂದರ್ಭದಲ್ಲಿ ನಡೆದರೆ ಅದು ಖಂಡಿತವಾಗಿಯೂ ಅಂಗೀಕಾರಾರ್ಹವಲ್ಲ ಮತ್ತು ಇದಕ್ಕೆ ಉತ್ತರ ಕೇಳಬೇಕಾಗುತ್ತದೆ ಎಂದು ಗೃಹ ಸಚಿವ ಅಮಿತ್ ಷಾ ಹೇಳಿದ್ದಾರೆ.

ಆದಾಗ್ಯೂ ಪಂಜಾಬ್ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಚನ್ನಿ ಅವರು, ಇದರ ಹಿಂದೆ ಯಾವುದೇ ರಾಜಕೀಯ ದುರುದ್ದೇಶ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.