ನವದೆಹಲಿ: ಪಂಜಾಬ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತಾ ಉಲ್ಲಂಘನೆ ಘಟನೆಗೆ ಸಂಬಂಧಿಸಿದಂತೆ, ಪಂಜಾಬ್ ನಲ್ಲಿ ಭದ್ರತಾ ಲೋಪಕ್ಕೆ ಸಂಬಂಧಿಸಿದ ಎಲ್ಲಾ ಪ್ರಯಾಣ ದಾಖಲೆಗಳನ್ನು ರಕ್ಷಿಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶಿಸಿದೆ.
ಪ್ರಧಾನಮಂತ್ರಿಯವರ ಚಲನವಲನಗಳಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳು ಮತ್ತು ಸಾಮಗ್ರಿಗಳನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ನ ರಿಜಿಸ್ಟ್ರಾರ್ ಜನರಲ್ ಅವರ ವಶದಲ್ಲಿ ತಕ್ಷಣವೇ ಭದ್ರಪಡಿಸುವಂತೆ ಉನ್ನತ ನ್ಯಾಯಾಲಯ ಸರ್ಕಾರಕ್ಕೆ ನಿರ್ದೇಶನ ನೀಡಿತು.
ಕೇಂದ್ರ ಮತ್ತು ಪಂಜಾಬ್ ಸರ್ಕಾರ ಗಳೆರಡೂ ರಚಿಸಿದ ಸಮಿತಿಗಳು ಸೋಮವಾರದವರೆಗೆ ತೆಡೆ ಹಿಡಿಯುವಂತೆಯೂ ನಿರ್ದೇಶಿಸಿರುವ ಸುಪ್ರೀಂ ಕೋರ್ಟ್ ನ್ಯಾಯಪೀಠವು, ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಂದೆ ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದೆ.