ನವದೆಹಲಿ : ಭಾರತದಲ್ಲಿ ಕರೋನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 1,41,986 ಮಂದಿಗೆ ಹೊಸದಾಗಿ ಸೋಂಕು ದೃಢಪಟ್ಟಿದೆ. ಈ ಮೂಲಕ ಭಾರತದಲ್ಲಿ ಕೋವಿಡ್ ಪಾಸಿಟಿವ್ ರೇಟ್ ಶೇ.9.28 ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 1,41,986 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 285 ಕರೋನಾ ಸೋಂಕಿತರು ಮೃತಪಟ್ಟಿದ್ದಾರೆ. ಒಂದೇ ದಿನ 40,895 ಕೊರೊನಾ ಸೋಂಕಿತರು ಚೇತರಿಸಿಕೊಂಡಿದ್ದು, ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.
ಸಕ್ರಿಯ ಪ್ರಕರಣಗಳು: 4,72,169, ಒಟ್ಟು ಚೇತರಿಕೆಗಳು: 3,44,12,740, ಸಾವಿನ ಸಂಖ್ಯೆ: 4,83,463, ಒಟ್ಟು ಲಸಿಕೆ: 150.06 ಕೋಟಿ ಡೋಸ್ ಗಳು.