ಕಾರ್ಯಕ್ರಮದಲ್ಲಿ ಭಾಗವಹಿಸುವುದರ ಜೊತೆಗೆ ಉತ್ತಮ ಮೌಲ್ಯಗಳನ್ನು ಹಂಚಿಕೊಳ್ಳುವಂತೆ ನನ್ನ ಯುವ ಸ್ನೇಹಿತರಿಗೆ ಸಲಹೆ ನೀಡುತ್ತೇನೆ. ಭಾರತದ ಪ್ರತಿಭಾವಂತ ಯುವ ಜನತೆಯನ್ನು ಕಂಡಾಗ ಹರ್ಷವಾಗುತ್ತದೆ’ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ರಾಷ್ಟ್ರ ನಿರ್ಮಾಣದಲ್ಲಿ ಏಕತೆಯ ಒಂದು ಶಕ್ತಿಯಾಗಿ ಯುವ ಜನತೆಯ ಮನಸ್ಸು ರೂಪಿಸುವುದು ಉತ್ಸವದ ಗುರಿಯಾಗಿದೆ ಎಂದು ಪ್ರಧಾನಿ ಕಚೇರಿ ಹೇಳಿದೆ. ಕೋವಿಡ್ ಹಿನ್ನೆಲೆಯಲ್ಲಿ ಈ ವರ್ಷ ಜ.12-13ರಂದು ವರ್ಚುವಲ್ ರೂಪದಲ್ಲಿ ಉತ್ಸವ ಆಯೋಜಿಸಲಾಗಿದೆ.