ನವದೆಹಲಿ: ಭಾರತದಲ್ಲಿ ಕರೋನಾ ವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 1,68,000 ಗಡಿ ದಾಟುತ್ತಿದೆ. ದೇಶದಲ್ಲಿ ಕೊವಿಡ್-19 ಪಾಸಿಟಿವಿಟಿ ದರ ಶೇಕಡಾ 10.64ರಷ್ಟಾಗಿದೆ.
ದೇಶದಲ್ಲಿ ಒಂದೇ ದಿನ 69,959 ಮಂದಿ ಕೊವಿಡ್-19 ಸೋಂಕಿತರು ಗುಣಮುಖರಾಗಿ ದ್ದರೆ, ಇದೇ ಅವಧಿಯಲ್ಲಿ 277 ಮಂದಿ ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದಾರೆ.
ಸಕ್ರಿಯ ಪ್ರಕರಣಗಳ ಸಂಖ್ಯೆ 8,21,446ಕ್ಕೆ ಏರಿಕೆ ಯಾಗಿದೆ. ದೇಶದಲ್ಲಿ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆಗೆ ಕಾರಣವಾಗಿರುವ ಓಮಿಕ್ರಾನ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲೂ ಭಾರಿ ಏರಿಕೆಯಾಗಿದೆ. ಒಟ್ಟು ಓಮೈಕ್ರಾನ್ ಸೋಂಕಿತ ಪ್ರಕರಣಗಳ ಸಂಖ್ಯೆಯು 4,461ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಈವರೆಗೂ 69,31,55,280 ಜನರಿಗೆ ಕೊರೊನಾವೈರಸ್ ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.
ಒಟ್ಟು 28 ರಾಜ್ಯಗಳಲ್ಲಿ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಕೋವಿಡ್ ನ ನೂತನ ರೂಪಾಂತರ ತಳಿ ಒಮಿಕ್ರಾನ್ ಪತ್ತೆಯಾಗಿದೆ. ಮಹಾರಾಷ್ಟ್ರದಲ್ಲಿ 1,247, ರಾಜಸ್ಥಾನದಲ್ಲಿ 645, ದೆಹಲಿಯಲ್ಲಿ 546, ಕರ್ನಾಟಕದಲ್ಲಿ 479 ಹಾಗೂ ಕೇರಳದಲ್ಲಿ 350 ಪ್ರಕರಣ ವರದಿಯಾಗಿದೆ.