ನವದೆಹಲಿ: ಓಮೈಕ್ರಾನ್ ಸೋಂಕು ಭೀತಿ ನಡುವೆಯೇ ದೇಶದಲ್ಲಿ ಮತ್ತೆ ಕೋವಿಡ್ ಸ್ಫೋಟಗೊಂಡಿದೆ. ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 1,94,720 ಹೊಸ ಪ್ರಕರಣಗಳು ಪತ್ತೆಯಾಗಿದ್ದು 442 ಮಂದಿ ಮೃತಪಟ್ಟಿದ್ದಾರೆ.
ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,60,70,510ಕ್ಕೆ ಏರಿಕೆಯಾಗಿದೆ. ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆ 4,84,655ಕ್ಕೆ ಏರಿಕೆ ಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 9,55,319ಕ್ಕೆ ತಲುಪಿದೆ.
ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 1,53,80,08,200 ಜನರಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದೆ.