Friday, 22nd November 2024

ಕೋವಿಡ್ ತಾಂಡವ: ಜ.31ರವರೆಗೆ ಖಾಸಗಿ-ಸರ್ಕಾರಿ ಶಾಲೆ ಬಂದ್‌

ನವದೆಹಲಿ: ಮಧ್ಯಪ್ರದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜ.15ರಿಂದ 31ರವರೆಗೆ ಎಲ್ಲಾ ಖಾಸಗಿ ಮತ್ತು ಸರ್ಕಾರಿ ಶಾಲೆ (1ರಿಂದ 12ನೇ ತರಗತಿ)ಗಳನ್ನು ಬಂದ್ ಮಾಡುವಂತೆ ಶುಕ್ರವಾರ ಘೋಷಿಸಿದೆ.

ರಾಜಕೀಯ ಸಮಾವೇಶ, ಧಾರ್ಮಿಕ ಸಮಾರಂಭಕ್ಕೆ ಅವಕಾಶ ಇಲ್ಲ ಎಂದು ತಿಳಿಸಿರುವ ಸರ್ಕಾರ, ರಾಜ್ಯದಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಯಾವುದೇ ನಿರ್ಬಂಧ ಹೇರಿಲ್ಲ ಎಂದು ಮುಖ್ಯಮಂತ್ರಿ ಶಿವರಾಜ್ ಚೌಹಾಣ್ ತಿಳಿಸಿದ್ದಾರೆ.

ಮಧ್ಯಪ್ರದೇಶದಲ್ಲಿ ಶುಕ್ರವಾರ 4,031 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಮೂವರು ಮೃತಪಟ್ಟಿ  ದ್ದಾರೆ. ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 17,652ಕ್ಕೆ ಏರಿಕೆಯಾಗಿದೆ.

ಮಧ್ಯಪ್ರದೇಶದಲ್ಲಿ ಕೋವಿಡ್ ನ ನೂತನ ರೂಪಾಂತರ ತಳಿ ಒಮೈಕ್ರಾನ್ ಪ್ರಕರಣಗಳ ಸಂಖ್ಯೆ 3,639ಕ್ಕೆ ಹೆಚ್ಚಳವಾಗಿದೆ. 24ಗಂಟೆಯಲ್ಲಿ 782 ಮಂದಿ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆಗಿದ್ದಾರೆ.