Saturday, 23rd November 2024

ಬಿಜೆಪಿಗೆ ಐಪಿಎಸ್ ಮಾಜಿ ಅಧಿಕಾರಿ ಸೇರ್ಪಡೆ

ಲಖನೌ: ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರ ಸಮ್ಮುಖದಲ್ಲಿ ಭಾನುವಾರ ಐಪಿಎಸ್ ಮಾಜಿ ಅಧಿಕಾರಿ ಅಸೀಮ್ ಅರುಣ್ ಅವರು ಬಿಜೆಪಿಗೆ ಸೇರ್ಪಡೆಯಾದರು.

ಖಾನ್ಪುರ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದ ಅಸೀಮ್ ಅರುಣ್ ಅವರು ತಿಂಗಳ ಆರಂಭದಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದು, ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಷ್ಟ್ರದ ಅಭಿವೃದ್ಧಿಗೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ಮಾರ್ಗ ನೀಡಿದ್ದಾರೆ. ಅದರಿಂದ  ಪ್ರಭಾವಿತ ನಾಗಿದ್ದೇನೆ. ರಾಜಕೀಯ ಕಾರ್ಯಗಳ ಮೂಲಕ ಹೆಚ್ಚಿನ ಕೊಡುಗೆ ನೀಡಲು ಬಿಜೆಪಿಗೆ ಸೇರಿದ್ದೇನೆ. ನನ್ನ ಸೇವಾವಧಿಯಲ್ಲಿ ನಾನು ಮಾಡಲು ಸಾಧ್ಯವಾಗದಿರು ವುದು ಬಹಳಷ್ಟಿದೆ. ಹಾಗಾಗಿ ರಾಜಕೀಯಕ್ಕೆ ಸೇರಲು ನಿರ್ಧರಿಸಿದ್ದೇನೆ ಎಂದು ಹೇಳಿದ್ದಾರೆ.

ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಿಗೆ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಫೆ.10ರಂದು ಮತ ಎಣಿಕೆ ನಡೆಯಲಿದೆ.

ಕಳೆದ ಎರಡು ದಿನಗಳ ಹಿಂದೆಯಷ್ಟೆ ಬಿಜೆಪಿ 107 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅದರಲ್ಲಿ 20 ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಿ 21 ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.