ಭೂಕಂಪದ ತೀವ್ರತೆ 5.3 ಆಗಿತ್ತು. ಭೂಕಂಪದಲ್ಲಿ ಬಲಿಯಾದವರಲ್ಲಿ ಮಹಿಳೆಯರು ಮತ್ತು ಮಕ್ಕಳು ಕೂಡ ಸೇರಿದ್ದಾರೆ.
ಪಶ್ಚಿಮ ಪ್ರಾಂತ್ಯದ ಬದ್ಸ್ಗೀಸ್ನ ಖಾದಿಸ್ ಜಿಲ್ಲೆಯಲ್ಲಿ 5.6 ತೀವ್ರತೆಯ ಭೂಕಂಪನ ಉಂಟಾಗಿದೆ. ಇದರಿಂದ ಮನೆಗಳ ಮೇಲ್ಚಾವಣಿ ಕುಸಿದ ಘಟನೆಗಳಲ್ಲಿ 12 ಮಂದಿ ಪ್ರಕೃತಿ ವಿಕೋಪಕ್ಕೆ ಬಲಿಯಾಗಿದ್ದಾರೆ. ಅಲ್ಲದೇ ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ಜಿಲ್ಲಾ ಗವರ್ನರ್ ಮೊಹಮ್ಮದ್ ಸಲೇಹ್ ಪುರ್ಡೆಲ್ ತಿಳಿಸಿದ್ದಾರೆ.
ಇದೇ ಜನವರಿ 1 ರಂದು 5.1 ತೀವ್ರತೆಯ ಭೂಕಂಪ ಸಂಭವಿಸಿತ್ತು. ಅಫ್ಘಾನಿಸ್ತಾನ-ತಜಕಿಸ್ತಾನ ಗಡಿಯಲ್ಲಿ ಭೂಕಂಪನವಾಗಿದೆ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 5.1ರಷ್ಟು ದಾಖಲಾಗಿತ್ತು.
ಅಫ್ಘಾನಿಸ್ತಾನ-ತಜಿಕಿಸ್ತಾನ್ ಗಡಿಯಲ್ಲಿ ಸಂಜೆ 6.45ಕ್ಕೆ ಭೂಕಂಪನದ ಅನುಭವವಾಗಿದೆ. ಹಾಗೇ, ಜಮ್ಮು ಮತ್ತು ಕಾಶ್ಮೀರದ ಪೂಂಚ್ ಮತ್ತು ನಿಯಂತ್ರಣ ರೇಖೆಯ ಸುತ್ತಲಿನ ಇತರ ಪ್ರದೇಶಗಳಲ್ಲಿಯೂ ಭೂಕಂಪನದ ಅನುಭವವಾಗಿತ್ತು.