Tuesday, 26th November 2024

ಮೂರು ಲಕ್ಷ ದಾಟಿದ ಕರೋನಾ, 9,287 ಓಮೈಕ್ರಾನ್ ಪ್ರಕರಣ

ನವದೆಹಲಿ: ಭಾರತದಲ್ಲಿ ಕರೋನಾ ಏರಿಳಿತ ಎಂದಿನಂತೆ ಮುಂದುವರೆದಿದೆ. ಎರಡೂವರೆ ಲಕ್ಷದ ಅಸುಪಾಸಿ ನಲ್ಲಿಯೇ ಸೋಂಕಿತರ ಸಂಖ್ಯೆ ಗುರುವಾರ  ಮೂರು ಲಕ್ಷ ದಾಟಿ ಮುನ್ನುಗ್ಗಿದೆ.

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 3,17,532 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 491 ಮಂದಿ ಮೃತಪಟ್ಟಿದ್ದಾರೆ.

ಇದರೊಂದಿಗೆ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 38218773ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆ 4,87,693ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 19,24,051ಕ್ಕೆ ತಲುಪಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 2,23,990 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,58,07,029 ಕ್ಕೆ ತಲುಪಿದೆ. ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯ ವರೆಗೂ ಒಟ್ಟಾರೆ 1,58,88,47,554 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

ಓಮೈಕ್ರಾನ್ ಸೋಂಕಿತರ ಸಂಖ್ಯೆ ಕೂಡ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಈ ವರೆಗೂ ದೇಶಾದ್ಯಂತ 9,287 ಪ್ರಕರಣಗಳು ವರದಿಯಾಗಿದೆ. ದೇಶಾದ್ಯಂತ ಇರುವ ಒಟ್ಟಾರೆ ಓಮೈಕ್ರಾನ್ ಸೋಂಕಿತರ ಸಂಖ್ಯೆ 9,287ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ.