ನವದೆಹಲಿ: ಭಾರತದಲ್ಲಿ ಕರೋನಾ ಏರಿಕೆ ಎಂದಿನಂತೆ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 3,33,533 ಹೊಸ ಕೇಸ್ ಪತ್ತೆಯಾಗಿದೆ. ಇದೇ ಅವಧಿಯಲ್ಲಿ 525 ಮಂದಿ ಮೃತಪಟ್ಟಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,92,37,264ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆ 4,89,409ಕ್ಕೆ ಏರಿಕೆಯಾಗಿದೆ.
ಸಕ್ರಿಯ ಪ್ರಕರಣಗಳ ಸಂಖ್ಯೆ 21,87,205ಕ್ಕೆ ತಲುಪಿದೆ. ಕಳೆದ 24 ಗಂಟೆಗಳಲ್ಲಿ 2,59,168 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿ ಕೊಂಡವರ ಸಂಖ್ಯೆ 3,65,60,650ಕ್ಕೆ ತಲುಪಿದೆ.
ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,61,92,84,270 ಜನರಿಗೆ ಲಸಿಕೆಯನ್ನು ನೀಡಲಾಗಿದೆ.