ಸ್ಯಾನಿಟೈಸ್ ಮಾಡುವ ಉದ್ದೇಶದಿಂದ ಪ್ರತಿ ಭಾನುವಾರ ದೇವಾಲಯ ಬಂದ್ ಮಾಡಲಾಗು ವುದು. ಎರಡು ಡೋಸ್ ಕೋವಿಡ್ ವ್ಯಾಕ್ಸಿನ್ ಪಡೆದುಕೊಂಡವರು ಹಾಗೂ 72 ಗಂಟೆಯೊಳಗಿನ ಆರ್ಟಿಪಿಸಿಆರ್ ರಿಪೋರ್ಟ್ ತೆಗೆದುಕೊಂಡು ಬರುವುದು ಅನಿವಾರ್ಯ ಎಂದಿದ್ದಾರೆ. ದೇವಸ್ಥಾನದ ಆವರಣದಲ್ಲಿ ಕೋವಿಡ್ ಮಾರ್ಗಸೂಚಿ ಪಾಲನೆ ಮಾಡುವುದು ಕಡ್ಡಾಯಗೊಳಿಸಲಾಗಿದೆ.
ಕಳೆದ ಜನವರಿ ತಿಂಗಳಲ್ಲಿ ಈ ಐತಿಹಾಸಿಕ ದೇವಸ್ಥಾನದೊಳಗೆ ಕೋವಿಡ್ ಪ್ರಕರಣ ಪತ್ತೆಯಾದ ಕಾರಣ ಈ ದೇಗುಲ ಬಂದ್ ಮಾಡಲು ನಿರ್ಧಾರ ಕೈಗೊಳ್ಳ ಲಾಗಿತ್ತು.
ದೇಶದಲ್ಲಿ ಮೂರನೇ ಕೋವಿಡ್ ಅಲೆ ಜೋರಾಗಿದ್ದ ಕಾರಣ ದೇಶದ ಬಹುತೇಕ ಎಲ್ಲ ದೇವಾಲಯಗಳು ಬಂದ್ ಆಗಿದ್ದವು. ಈ ಸಾಲಿನಲ್ಲಿ ಐತಿಹಾಸಿಕ ಒಡಿಶಾದ ಪುರಿ ಜಗನ್ನಾಥ ದೇವಾಲಯ ಸಹ ಸೇರಿಕೊಂಡಿತ್ತು.