Saturday, 23rd November 2024

ನಾಮಪತ್ರ ಸಲ್ಲಿಸಿದ ಭಗವಂತ್ ಮಾನ್

ಸಂಗ್ರೂರ್: ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ್ ಮಾನ್ ಧುರಿ ವಿಧಾನಸಭಾ ಕ್ಷೇತ್ರದಿಂದ ಶನಿವಾರ ನಾಮಪತ್ರ ಸಲ್ಲಿಸಿದ್ದಾರೆ.

ಸಂಗ್ರೂರ್ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿರುವ ಮಾನ್ ಅವರು ಈಗ ಸಂಗ್ರೂರ್ ಜಿಲ್ಲೆಯ ಧುರಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.

ಮಾನ್ ಕಾಮಿಡಿಯನ್ ಆಗಿ ತಮ್ಮ ವೃತ್ತಿಜೀವನವನ್ನು ಆರಂಭಿಸಿದರು. ಅವರು 2011 ರಲ್ಲಿ ಮನ್‌ಪ್ರೀತ್ ಸಿಂಗ್ ಬಾದಲ್ ನೇತೃತ್ವದ ಪಂಜಾಬ್ ಪೀಪಲ್ಸ್ ಪಾರ್ಟಿಯೊಂದಿಗೆ ತಮ್ಮ ರಾಜಕೀಯ ಜೀವನ ಆರಂಭಿಸಿದರು. 2012 ರಲ್ಲಿ ಅವರು ಲೆಹ್ರಗಾಗಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿ, ಸೋತರು.

ನಂತರ, ಅವರು 2014 ರಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸೇರಿದರು ಹಾಗೂ ಸಂಗ್ರೂರ್ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದರು. 2014 ರಿಂದ ಸತತವಾಗಿ ಎರಡನೆ ಅವಧಿಗೆ ಸಂಗ್ರೂರ್‌ನ ಪಂಜಾಬ್ ಲೋಕಸಭಾ ಸ್ಥಾನಕ್ಕೆ ಚುನಾಯಿತರಾಗಿದ್ದಾರೆ.