Friday, 22nd November 2024

ಈ ಬಜೆಟ್‌ನಲ್ಲಿ ಮುಂದಿನ 100 ವರ್ಷಗಳ ದೃಷ್ಟಿಕೋನವಿದೆ: ನರೇಂದ್ರ ಮೋದಿ

#narendramodi

ನವದೆಹಲಿ: ಮುಂದಿನ 100 ವರ್ಷ ಗುರಿಯಾಗಿಸಿ ಬಜೆಟ್ ಮಂಡಿಸಲಾಗಿದೆ, ಬಜೆಟ್ ನಲ್ಲಿ ಎಲ್ಲಾ ವಲಯಗಳಿಗೆ ಆದ್ಯತೆ ನೀಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಬಜೆಟ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬಡವರ ಏಳಿಗೆ ಬಜೆಟ್ ಮೂಲ ಉದ್ದೇಶ. ಎಲ್ಲಾ ವಲಯಗಳಿಗೂ ಆದ್ಯತೆ ನೀಡಲಾಗಿದೆ. ಉದ್ಯೋಗ, ಮೂಲ ಸೌಕರ್ಯ ಅಭಿವೃದ್ಧಿಯ ಬಜೆಟ್ ಇದಾ ಗಿದೆ. ಕೃಷಿ ವಲಯಕ್ಕೆ, ರೈತರ ಆದಾಯ ದ್ವಿಗುಣಕ್ಕೆ ಯೋಜನೆ ರೂಪಿಸಲಾಗಿದೆ. ಬಜೆಟ್ ನಲ್ಲಿ ರಕ್ಷಣಾ ವಲಯಕ್ಕೆ ಹೆಚ್ಚಿನ ಆದ್ಯತೆ ನಿಡಲಾಗಿದೆ ಎಂದರು.

ಬಜೆಟ್ ಬಗ್ಗೆ ಜನಸಾಮಾನ್ಯರಿಂದ ಉತ್ತಮ ಪ್ರತಿಕ್ರಿಯೆ ಬಂದಿದೆ. ಜನರ ಪ್ರತಿಕ್ರಿಯೆಯಿಂದ ಸೇವೆ ಮಾಡಲು ಇನ್ನಷ್ಟು ಹುಮ್ಮಸ್ಸು ಬಂದಿದೆ. ಜನಸ್ನೇಹಿ, ಅಭಿವೃದ್ಧಿಪರ ಬಜೆಟ್ ಮಂಡಿಸಿದ್ದಕ್ಕೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

ಬುಧವಾರ ಬಜೆಟ್ ಬಗ್ಗೆ ವಿಸ್ತೃತವಾಗಿ ವಿವರಿಸುತ್ತೇನೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.